5:20 PM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಪತ್ರಕರ್ತ ರೇಮಂಡ್ ಡಿ ಕುನ್ಹಾರ ‘ಬೊಳ್ಳಿಲು’ ತುಳು ಪುಸ್ತಕ ಬಿಡುಗಡೆ; ಹುಟ್ಟೂರ ಸನ್ಮಾನ

22/03/2026, 20:29

ಮೂಡುಬಿದಿರೆ(reporterkarnataka.com): ಪತ್ರಕರ್ತ, ಲೇಖಕ, ಕವಿ ರೇಮಂಡ್ ಡಿ ಕುನ್ಹಾ ರ ಬೊಳ್ಳಿಲು ತುಳು ಪುಸ್ತಕ ಬಿಡುಗಡೆ ಹಾಗೂ ಹುಟ್ಟೂರ ಸನ್ಮಾನ ಸಮಾಜ ಮಂದಿರದಲ್ಲಿ ಭಾನುವಾರ ನಡೆಯಿತು.
ಮೂಡುಬಿದಿರೆ ತುಳುಕೂಟ, ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್, ತ್ರಿಭುವನ್ ಜೆಸಿಐ, ಸೀನಿಯರ್ ಚೇಂಬರ್, ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್, ತಾಕೊಡೆ ಅಭಿಮಾನಿ ಬಳಗ, ರಿಕ್ಷಾ ಚಾಲಕ ಮಾಲಕರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಹುಟ್ಟೂರ ಸನ್ಮಾನ ಹಾಗೂ ಪುಸ್ತಕ ಬಿಡುಗಡೆ ನೆರವೇರಿತು.


ಪ್ರಾರಂಭದಲ್ಲಿ ಉದಯೋನ್ಮುಖ ಚುಟುಕು ಕವಿಗಳ ಕವಿಗೋಷ್ಠಿ ಜರುಗಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವೇಕ್ ಆಳ್ವ ಅವರು ಪುಸ್ತಕ ಬಿಡುಗಡೆ ಗೊಳಿಸಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದ ರೇಮಂಡ್ ಅವರಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ವಿವಿಧ ಸಂಘಗಳ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ಹಾಜರಿದ್ದರು. ಸದಾನಂದ ನಾರಾವಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು