3:05 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಪತ್ರಕರ್ತ ವೀರೇಶ್ ಕಡ್ಡಿಕೊಪ್ಲ ನಿಗೂಢ ಸಾವು: ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆಗೆ ಸ್ಪೀಕರ್ ಖಾದರ್ ಸೂಚನೆ

27/07/2024, 22:51

ಮಂಗಳೂರು(reporterkarnataka.com): Tv5 ವಿಡಿಯೋ ಜರ್ನಲಿಸ್ಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ವೀರೇಶ್ ಕಡ್ಡಿಕೊಪ್ಲ ಅವರ ನಿಗೂಢ ಸಾವಿನ ಕುರಿತು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಸ್ಪೀಕರ್ ಯು.ಟಿ. ಖಾದರ್ ಆದೇಶ ನೀಡಿದ್ದಾರೆ.
ವೀರೇಶ್ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಪೀಕರ್ ಯು. ಟಿ. ಖಾದರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಖಾದರ್ ಗದಗ ಎಸ್ ಪಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವೀರೇಶ್ ನಿಗೂಢ ಸಾವಿನ ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಬೇಕು. ಸತ್ಯಾಸತ್ಯತೆ ಅರಿಯಲು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಸೂಚನೆ ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು