3:16 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಜುಲೈ 15: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 33ನೇ ಕೃಷ್ಣಾಪುರ ಶಾಖೆ ಉದ್ಘಾಟನೆ

13/07/2024, 20:45

ಮಂಗಳೂರು(reporterkarnataka.com): ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ 32 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ಸ್ವಂತ ಮಾಲೀಕತ್ವದ ನೂತನ 33ನೇ ಕೃಷ್ಣಾಪುರ ಶಾಖೆಯನ್ನು ಸುರತ್ಕಲ್‌ನ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿರುವ ‘ಐಕನ್ ಪ್ಲಾನೆಟ್’ ಕಟ್ಟಡದಲ್ಲಿ ಜುಲೈ 15ರಂದು ಪೂರ್ವಾಹ್ನ 11.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ “ಸಹಕಾರ ರತ್ನ” ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ಅವರು ವಹಿಸಲಿದ್ದಾರೆ. ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ರವರು ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವಾರವರು ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮೈಸೂರು ಪ್ರಾಂತ್ಯದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಅವರು ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.) ಮಂಗಳೂರು ಇದರ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್. ಎನ್., ಸ್ಥಳೀಯ ಮನಪಾ ಸದಸ್ಯರುಗಳಾದ ಲಕ್ಷ್ಮೀ ಶೇಖರ್ ದೇವಾಡಿಗ ಹಾಗೂ ಶಂಶಾದ್ ಅಬೂಬಕ್ಕರ್ , ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ದೇವೇಂದ್ರ ಕೋಟ್ಯಾನ್ , ನಾರಾಯಣಗುರು ವಿದ್ಯಾ ಸಂಸ್ಥೆಗಳು ಕಾಟಿಪಳ್ಳದ ಅಧ್ಯಕ್ಷ ಪಿ. ದಯಾಕರ್ , ಸ್ಥಳೀಯ ಮನಪಾ ಮಾಜಿ ಸದಸ್ಯರಾಗಿರುವ ತಿಲಕ್ ರಾಜ್ ಕೃಷ್ಣಾಪುರ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಮುನೀರ್ ಕಾಟಿಪಳ್ಳ ಅವರು ಭಾಗವಹಿಸಲಿದ್ದಾರೆ.
ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆಯ ನುರಿತ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಸಣಾ ಶಿಬಿರ ಹಾಗೂ ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಆಪ್ ಡೆಂಟಲ್ ಸಾಯನ್ಸ್ ಮುಕ್ಕ , ಸುರತ್ಕಲ್ ಇಲ್ಲಿನ ನುರಿತ ವೈದ್ಯರ ತಂಡದಿAದ ಉಚಿತ ದಂತ ತಪಸಣಾ ಶಿಬಿರವನ್ನು ಪೂರ್ವಾಹ್ನ 9.30 ರಿಂದ ಅಪರಾಹ್ನ 12.30 ರವರೆಗೆ ಆಯೋಜಿಸಲಾಗಿದೆ.
ಮನೋರಂಜನಾ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಟರಾಗಿರುವ ನವೀನ್ ಡಿ.ಪಡೀಲ್‌ರವರ ಗೌರವ ಉಪಸ್ಥಿತಿಯಲ್ಲಿ ಜಿಲ್ಲೆಯ ಪ್ರಖ್ಯಾತ ಕಲಾವಿದರಾದ ಹುಸೈನ್ ಕಾಟಿಪಳ್ಳ ಹಾಗೂ ತಂಡದಿಂದ ಪೂರ್ವಾಹ್ನ 11 ರಿಂದ ಆಯೋಜಿಸಲಾಗಿದೆ.
ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರವನ್ನು ನೀಡಲಾಗುವುದು ಹಾಗೂ ಗ್ರಾಹಕರಿಗೆ ಉಚಿತ ಉಡುಗೊರೆಯ ಜೊತೆಗೆ ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲವನ್ನು ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್‌ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು