4:12 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

 ಜುಲೈ ಕೊನೆಯ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ?: ಶಿಕ್ಷಣ ಇಲಾಖೆಯಿಂದ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ 

19/06/2021, 07:18

ಬೆಂಗಳೂರು(reporterkarnataka news):  ಜುಲೈ ಕೊನೆಯ ವಾರದಲ್ಲಿ ಎಸ್ಸೆಸ್ಸೆಲ್ಸಿ
ಪರೀಕ್ಷೆ ನಡೆಯೋದು ಬಹುತೇಕ ಖಚಿತ ಎಂದು ಹೇಳಿರುವ ಶಿಕ್ಷಣ ಇಲಾಖೆ ಹೇಳಿದೆ. ಈ ಮಧ್ಯೆ

ಪರೀಕ್ಷೆಯ ಎಲ್ಲ ಮಾದರಿ ಪ್ರಶ್ನೆ ಪತ್ರಿಕೆಯನ್ನು ತನ್ನ ವೆಬ್ ಸೈಟ್ ನಲ್ಲಿ ಬಿಡುಗಡೆಗೊಂಡಿದೆ. ಇದರೊಂದಿಗೆ ಎಸ್​ಎಸ್​ಎಲ್​​ಸಿ ಪರೀಕ್ಷೆ ಬಗ್ಗೆ ಉಂಟಾಗಿರುವ ಗೊಂದಲಕ್ಕೆ ತೆರೆ ಬಿದ್ದಿದೆ.

ಎರಡು ದಿನದ ಹಿಂದೆ ಕೋರ್​ ಸಬ್ಜೆಕ್ಟ್​ ನ ಮಾದರಿ ಪ್ರಶ್ನೆ ಪತ್ರಿಕೆ ರಿಲಿಸ್​ ಆಗಿತ್ತು. ಇದೀಗ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯೂ ಸಹ ಬಿಡುಗಡೆಯಾಗಿದೆ. ಅದರಂತೆ ಇದೀಗ ಎಲ್ಲಾ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್​ ಆಗಿದೆ. ಮಾದರಿ ಪ್ರಶ್ನೆಪತ್ರಿಕೆ ಶಿಕ್ಷಣ ಇಲಾಖೆಯ 

www.sslc.Karnataka.gov.in ವೆಬ್ ಅಲ್ಲಿ ಸಿಗಲಿದೆ.

ಪ್ರಥಮ ಭಾಷೆ ಕನ್ನಡ,  ಪ್ರಥಮ ಭಾಷೆ  ಉರ್ದು, ಪ್ರಥಮ ಭಾಷೆ  ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ ಪತ್ರಿಕೆ ಬಿಡುಗಡೆಯಾಗಿದೆ. ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ ಹಾಗೂ ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್ ನ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್​ ಮಾಡಲಾಗಿದೆ. ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆಪತ್ರಿಕೆಗಳಿಗೆ 3 ಗಂಟೆಗಳ ಕಾಲ ಪರೀಕ್ಷೆ ನಡೆಯಲಿದೆ. 

ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಆಗಿದ್ದು, ಉತ್ತರಗಳನ್ನು  ಒಎಂ ಆರ್ ಶೀಟ್ ನಲ್ಲಿ ನಮೂದಿಸಬೇಕು. ಒಎಂ ಆರ್ ಶೀಟ್ ಮಾದರಿಯೂ ಪ್ರಕಟಗೊಂಡಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಘೋಷಣೆ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು