ಇತ್ತೀಚಿನ ಸುದ್ದಿ
ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ ? ‘ಯಾಸ್’ ನಿಂದ ಆರಂಭದಲ್ಲಿ ದುರ್ಬಲ?
31/05/2021, 07:47
ಬೆಂಗಳೂರು(reporterkarnataka news): ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಪ್ರವೇಶಿಸುವ ನಿರೀಕ್ಷೆಯಿದೆ. ಆದರೆ ಯಾಸ್ ಚಂಡಮಾರುತದ ಪರಿಣಾಮ ಆರಂಭದಲ್ಲಿ ದುರ್ಬಲ ಮುಂಗಾರು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾಸ್ ಚಂಡಮಾರುತ ಪರಿಣಾಮ ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಮಳೆಯಾಗುತ್ತಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗಿದೆ.
ಈ ಮುನ್ನ ನೈಋುತ್ಯ ಮುಂಗಾರು ಜೂನ್ 1ರಂದು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದ್ದು, ಜೂನ್ 5ರಂದು ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿಯೇ ರಾಜ್ಯದಲ್ಲಿ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ
ಮುನ್ಸೂಚನೆ ನೀಡಿತ್ತು. ಇದೀಗ 31ರಂದೇ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.