2:05 AM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಜೂನ್ 9: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಚಿಕಿತ್ಸಾ ಶಿಬಿರ

07/06/2024, 09:00

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನೀರುಮಾರ್ಗ ಶಾಖೆಯ 2ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಚಿಕಿತ್ಸಾ ಶಿಬಿರವು ನೀರುಮಾರ್ಗ ಸುಬ್ರಹ್ಮಣ್ಯ ನಗರದ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಹಾಗೂ ನೀರುಮಾರ್ಗ
ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ಜಂಟಿ ಸಹಯೋಗದೊಂದಿಗೆ ಜೂನ್ 9ರಂದು ಪೂರ್ವಾಹ್ನ 9.30ರಿಂದ ಅಪರಾಹ್ನ 12.30ರ ವರೆಗೆ ನೀರುಮಾರ್ಗದ ಶ್ರೀ ಸುಬ್ರಮಣ್ಯ ಭಜನಾ ಮಂಡಳಿ ಸಭಾಭವನ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ  ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ಉಚಿತ ದಂತ ತಪಾಸಣೆ ಮತ್ತು ಸಲಹೆ , ಹಲ್ಲುಗಳ ಶುಚೀಕರಣ, ಹಲ್ಲುಗಳ ಚಿಕ್ಕ ಚಿಕ್ಕ ಭರ್ತಿಗೊಳಿಸುವ ಚಿಕಿತ್ಸೆ, ಚಿಕಿತ್ಸೆಗೆ ಒಳಪಡದ ಮತ್ತು ಬಹಳ ಕೆಟ್ಟಿರುವ ಹಲ್ಲುಗಳನ್ನು ಕೀಳಿಸುವುದು, ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಮಾಡಲಾಗುವುದು. ಬಿಪಿ ಮತ್ತು ಮದುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ರಕ್ತ ಗುಂಪಿನ ವರ್ಗಿಕರಣ, ಉಚಿತ ಔಷಧಿ ವಿತರಣೆ ಹಾಗೂ ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು