ಇತ್ತೀಚಿನ ಸುದ್ದಿ
ಜ್ವರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ
21/06/2023, 11:40
ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಯಿತು. ಪತ್ನಿಯ ಅಸ್ವಸ್ಥದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿಗೆ ತೆರಳುವ ಸಮಯದಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಪತ್ನಿಯ ಆರೋಗ್ಯ ವಿಚಾರಿಸಿ ದೆಹಲಿಗೆ ಹೊರಟಿದ್ದಾರೆ.