5:35 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಜ್ಯೋತಿ ಥಿಯೇಟರ್ ಸಮೀಪ ಬಸ್ ಬೇ ನಿರ್ಮಾಣ: ಟ್ರಾಫಿಕ್ ಜಾಮ್ ತಡೆಗೆ ಕ್ರಮ; ಮೇಯರ್, ಶಾಸಕರಿಂದ ಸ್ಥಳ ಪರಿಶೀಲನೆ

01/07/2021, 18:18

ಮಂಗಳೂರು(reporterkarnataka news):

ನಗರದ ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ  ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು. 

ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ನಿವಾರಿಸಲು ಇದು ಸಹಕಾರಿಯಾಗಿದೆ. ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಿಂದ ಬಂಟ್ಸ್ ಹಾಸ್ಟೆಲ್ ಮೂಲಕ ಹಾದು ಹೋಗುವ ಬಸ್ ಗಳು ರಸ್ತೆಯಲ್ಲಿಯೇ ನಿಲ್ಲಿಸುವುದರಿಂದ ಈ ಭಾಗದಲ್ಲಿ ವಿಪರೀತ ಟ್ರಾಫಿಕ್ ಜಾಮ್ ಉಂಟಾಗುತಿದ್ದು ಬಸ್ ಬೇ ನಿರ್ಮಾಣವಾದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು‌. 

ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಬಸ್ ಬೇ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗಿದೆ. ಜ್ಯೋತಿ ಟಾಕೀಸ್ ಪಕ್ಕದಲ್ಲಿ ಬಸ್ ಬೇ ನಿರ್ಮಿಸುವುದರಿಂದ ಇಲ್ಲಿನ ವಾಹನ ದಟ್ಟಣೆ ನಿವಾರಣೆಯಾಗಲಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಸ್ಮಾರ್ಟ್ ಸಿಟಿ ಅಧಿಕಾರಿಗಳು, ನಗರ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು