11:55 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೆ.ಆರ್. ಪೇಟೆ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರಾಗಿ ಹೇಮಾ ಅವಿರೋಧ ಆಯ್ಕೆ

04/03/2023, 11:27

ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ

info.reporterkarnataka@gmail.com

ಕೆ. ಆರ್. ಪೇಟೆ ತಾಲೂಕಿನ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹೇಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷರಾಗಿದ್ದ ಶಶಿಧರ್ ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಹೇಮಾ ಅವರು ಬಿಟ್ಟರೆ ಉಳಿದ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಹೇಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.

ನೂತನ ಅಧ್ಯಕ್ಷೆ ಅಭಿನಂದಿಸಿ ಮಾತನಾಡಿದ ಬೀರುವಳ್ಳಿ ಸೊಸೈಟಿ ನಿರ್ದೇಶಕ ಲಕ್ಷ್ಮೇಗೌಡ ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ.ಈ ಸಂದರ್ಭದಲ್ಲಿ ಹೈನುವಾರಿಕೆ ನೆರವಾಗಲಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಬೆಳೆದು ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿದೆ. ಹೈನುಗಾರಿಕೆಯಿಂದ ಆದಾಯ ಕಾಣಬಹುದಾಗಿದೆ.ಈ ಅವಕಾಶ ಬಳಸಿಕೊಳ್ಳಬೇಕು ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ನಿರ್ದೇಶಕರು ಸಂಘದಲ್ಲಿ ರಾಜಕಾರಣ ಬೆರಸದೇ ಪಕ್ಷಾತೀತವಾಗಿ ಪಾಲ್ಗೊಂಡು ಸಂಘದ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು.
ಬಳಿಕ ಮಾತನಾಡಿ ನೂತನ ಅಧ್ಯಕ್ಷ ಹೇಮ ನನ್ನನ್ನು ಅವಿರೋಧವಾಗಿ ಅಧ್ಯಕ್ಷರಾಗಲು ಸಹಕರಿಸಿದ ನಮ್ಮ ಗ್ರಾಮದ ಮುಖಂಡರು ಹಾಗೂ ಸಂಘದ ಸದಸ್ಯರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು.ಷೇರುದಾರರು ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಬೇಕು.ಸಂಘವು ಉಳಿದರೆ ನಾವೆಲ್ಲರೂ ಉಳಿದಂತೆ.ಆದ್ದರಿಂದ ನನ್ನ ಆಡಳಿತ ಅವಧಿಯಲ್ಲಿ ಎಲ್ಲರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರೂಪ ಕೃಷ್ಣೆಗೌಡ,ಬಿರುವಳ್ಳಿ ಮುಖಂಡ ಹರೀಶ್,ಅಕ್ಕಿಹೆಬ್ಬಾಳು ಹೋಬಳಿ ಜೆಡಿಎಸ್ ಬಸವಲಿಂಗಪ್ಪ,ಬೀರುವಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಿರೇಗೌಡ, ದೊಡ್ಡೇಗೌಡ, ಪರಶುರಾಮ್, ಸಂಘದ ಉಪಾಧ್ಯಕ್ಷ ಸಾವಿತ್ರಮ್ಮ ನಿರ್ದೇಶಕರುಗಳಾದ ಶಶಿಧರ್ ಬಿ ಜೆ, ಜವರೇಗೌಡ ಬಿ ಸಿ, ಶಿವರಾಮೇಗೌಡ ಬಿ ಎಸ್, ವಿರೂಪಾಕ್ಷಪ್ಪ ಎ ಬಿ, ಬಲ್ಲೇಶ್ ಬಿ ಎಲ್, ಧನಂಜಯ ಬಿ ಎನ್, ರುಕ್ಮಿಣಮ್ಮ, ನೀಲಶೆಟ್ಟಿ, ವಸಂತಮ್ಮ, ದ್ಯಾವನಾಯಕ, ಕಾರ್ಯದರ್ಶಿ ಯೋಗೇಶ್ ಬಿ ಆರ್, ಸಿಬ್ಬಂದಿಗಳಾದ ಯೋಗೇಂದ್ರ, ರಕ್ಷಿತ್, ಸಣ್ಣ ತಾಯಮ್ಮ, ಸೇರಿದಂತೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು