5:14 AM Sunday5 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಕಾಡಬೆಟ್ಟು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದಿಂದ ಅಟಿದ ಲೇಸ್ ಕಾರ್ಯಕ್ರಮ

17/08/2024, 18:30

ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದ. ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ ಬಡತನದಿಂದಿದಗದರೂ ಸಂತೋಷದಿಂದ ಜೀವನ ಮಾಡುತ್ತಿದ್ದರು. ಈಗ ಬಡತನದಿಂದ ಹೊರಗಡೆ ಬಂದಿದ್ದಾರೆ. ಆದರೆ ಸಂತೋಷದ, ಆರೋಗ್ಯವಂತ ಜೀವನ ಇಲ್ಲ ಎಂದರು.
ಆಟಿ ತಿಂಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಗ್ಗದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾತನಾಡಿ ಹಿಂದಿನ ಆಟಿ ತಿಂಗಳಿಗೂ ಈಗ ಆಟಿ ತಿಂಗಳಿಗೂ ಬಹಳ ವ್ಯತ್ಯಾಸವಿದೆ. ನಮ್ಮ ಪೂರ್ವಿಕರು ಪರಿಸರದಲ್ಲಾಗುವ ಅಸಮತೋಲನದಿಂದಾಗಿ ಬರುವ ರೋಗರುಜಿನಗಳನ್ನು ತಡೆಗಟ್ಟಲು ಪ್ರಕೃತಿದತ್ತವಾದ ಆಹಾರ ಪದ್ಧತಿಗಳನ್ನು ಅನುಸರಿಸುತಿದ್ದರು. ಈಗ ಆರೋಗ್ಯ ಸಮಸ್ಯೆ ಎದುರಾದರೆ ಆಸ್ಪತ್ರೆಗೆ ಭೇಟಿ ನೀಡುವಂತಾಗಿದೆ. ಆಟಿಕೂಟಗಳನ್ನು ಮಾಡಿ ಜನರಿಗೆ ನಮ್ಮ ಆಹಾರ ಪದ್ಧತಿಯ ಮನವರಿಕೆ ಮಾಡುವ ಅವಶ್ಯಕತೆ ಇದೆ ಎಂದರು.
ವೇದಿಕೆಯಲ್ಲಿ ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾಡಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಜಾನನ ಭಟ್, ಕಾಡಬೆಟ್ಟು ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ ಕುಮಾರಿ ,ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಕಾಶ್, ಕಾಡಬೆಟ್ಟು ಒಕ್ಕೂಟದ ಮಾಜಿ ಅಧ್ಯಕ್ಷ‌ ಚಂದಪ್ಪ ಮೂಲ್ಯ ಉಪಸ್ಥಿತರಿದ್ದರು.
ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರುಗಳು, ಶೌರ್ಯ ವಿಪತ್ತು ನಿರ್ವಹಣೆ ಘಟಕ ವಗ್ಗದ ಪ್ರತಿನಿಧಿ ಪ್ರವೀಣ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ರೇಖಾ ಪಿ. ಪ್ರಾರ್ಥಿಸಿ,, ಲೀಲಾವತಿ ಸ್ವಾಗತಿಸಿ, ತಾರನಾಥ ಶೆಟ್ಟಿ ವಂದಿಸಿ, ಗಣೇಶ್ ಎಸ್ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು