ಇತ್ತೀಚಿನ ಸುದ್ದಿ
ಕಾಡಾನೆ ದಾಳಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ದಾರುಣ ಸಾವು: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ
01/12/2024, 15:02
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಹೊಲದಲ್ಲಿ ಕೆಲಸ ಮಾಡುವಾಗ ಆನೆ ದಾಳಿಗೆ ತುತ್ತಾಗಿ
ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ.
ಉಮೇಶ್ (56) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆನೆ ಬಗ್ಗೆ ಮಾಹಿತಿ ನೀಡಿದರೂ ಅರಣ್ಯ ಇಲಾಖೆ ಅಧಿಕಾರಿಗಳು
ಸ್ಥಳಕ್ಕೆ ಬಂದಿಲ್ಲ ಎಂದು ಕಿಡಿ ಕಾರಿದ್ದಾರೆ.
ದುರಂತ ನಡೆದ ಬಳಿಕ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು, ಅರಣ್ಯ ಅಧಿಕಾರಿಗಳ ಭೇಟಿ ನೀಡಿದ್ದಾರೆ.