ಇತ್ತೀಚಿನ ಸುದ್ದಿ
ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು: ಮೂಡಿಗೆರೆ ತಾಲೂಕಿನಲ್ಲಿ ದಾರುಣ ಘಟನೆ
09/09/2022, 09:30
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದಲ್ಲಿ ನಡೆದಿದೆ.






ಅರ್ಜುನ್ (47) ಎಂಬವರು ತೋಟ ಕೆಲಸಕ್ಕೆ ಹೋಗುತ್ತಿದ್ದಾಗ ಒಂಟಿ ಸಲಗ ಅವರ ಮೇಲೆ ದಾಳಿ ನಡೆಸಿದೆ. ಕಾಡಾನೆಯ ತುಳಿತಕ್ಕೆ ಸಿಕ್ಕಿದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














