2:25 PM Sunday31 - August 2025
ಬ್ರೇಕಿಂಗ್ ನ್ಯೂಸ್
Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ‌ ಸಹೋದರತೆ!: ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ !!; ಅರಿಶಿನ-ಕುಂಕುಮ ಜತೆ ಸೀರೆ ಗಿಫ್ಟ್!!!

09/09/2024, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದೆಡೆ ಸಬ್ ಇನ್ಸ್ ಪೆಕ್ಟರ್ ರಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಸುದ್ದಿ ಮಾಡಿದ್ದರೆ, ಇಲ್ಲೊಬ್ಬರು ಸಬ್ ಇನ್ಸ್ ಪೆಕ್ಟರ್ ತಮ್ಮ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ನೀಡಿ ಸೋದರತ್ವ ಮೆರೆದಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆ ಎರಡು ಬಗೆಯ ಪೊಲೀಸರಿಗೆ ಸಾಕ್ಷಿಯಾಗಿದೆ.
ಕಾಫಿನಾಡಿನ ಬಾಳೆಹೊನ್ನೂರು ಪಿಎಸ್ಐ ರವೀಶ್ ಅವರು ಗಣೇಶ ಚೌತಿಯ ಅಂಗವಾಗಿ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಬಾಗಿನ ನೀಡಿ ಸೋದರತ್ವ ಭಾವನೆ ಮೆರೆದಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪವಿದೆ. ಆದರೆ ಇದಕ್ಕೆ ವಿರುದ್ಧವಾಗಿ ಬಾಳೆಹೊನ್ನೂರು ಪಿಎಸ್ಐ ರವೀಶ್ ರಿಂದ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಕೆ ಮಾಡಿ ಅವರನ್ನು ತನ್ನ ಸಹೋದರಿಯರಾಗಿ ಪರಿಗಣಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ಅರಿಶಿನ-ಕುಂಕುಮ, ಹಣ್ಣು-ಕಾಯಿ, ಬಳೆ, ಸೀರೆ, ಸ್ವಿಟ್ಸ್ ಕೊಟ್ಟು ಗೌರವಿಸಿದ್ದಾರೆ.
ಗೌರಿ-ಗಣೇಶ ಹಬ್ಬದಂದು ಸಹೋದರರು ಅಕ್ಕ-ತಂಗಿಯರಿಗೆ ಬಾಗಿನ ನೀಡುತ್ತಾರೆ.
ನಮ್ಮ ಠಾಣೆಯ ಮಹಿಳಾ ಸಿಬ್ಬಂದಿಗಳು ನಮ್ಮ ಸಹೋದರಿಯರು ಎಂದು ಬಾಗಿನ ಕೊಟ್ಟ ಪಿಎಸ್ಐ ರವೀಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು