4:22 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

‘ಕಾಣದಂತೆ ಮಾಯವಾದನು ನಮ್ಮ ಶಿವ..’ ಹಾಡಿ ಕುಣಿದ ಪೋರ ಈ ‘ರಾಜಕುಮಾರ’

29/10/2021, 15:26

ಅಶೋಕ್ ಕಲ್ಲಡ್ಕ ಮಂಗಳೂರು
info.reporterkarnataka@gmail.com

ಪುನೀತ್ ರಾಜ್ ಕುಮಾರ್…

ಕನ್ನಡದ ವರನಟ ಡಾ. ರಾಜ್ ಕುಮಾರ್ – ಪಾರ್ವತಿಯಮ್ಮ ದಂಪತಿಯ ಕೊನೆಯ ಪುತ್ರ. ಚಿಕ್ಕ ವಯಸ್ಸಿನಲ್ಲಿ ಬಣ್ಣ ಹಚ್ಚಿಕೊಂಡು ಬೆಳ್ಳಿಪರದೆಯಲ್ಲಿ ಕುಣಿದ ಪೋರ. ಅಷ್ಟೇ ಅಲ್ಲ ಬಾಲನಟನಾಗಿರುವಾಗಲೇ ಸಿನಿಮಾ ರಸಿಕರ ಹೃದಯಕ್ಕೆ ಲಗ್ಗೆ ಹಾಕಿದ ತುಂಟ.

ಡಾ. ರಾಜ್ ಕುಮಾರ್ ಹಾಗೂ ಅಂಬಿಕಾ ಅಭಿನಯದ’ಚಲಿಸುವ ಮೋಡಗಳು’ ಸಿನಿಮಾ ನೋಡಿದವರಿಗೆ ಆ ದೃಶ್ಯವನ್ನು ಮರೆಯಲು ಖಂಡಿತಾ ಸಾಧ್ಯವಿಲ್ಲ. ಬಾಯಿಯಲ್ಲಿ ಮೌತ್ ಆರ್ಗಾನ್ ನುಡಿಸುತ್ತಾ ‘ಕಾಣದಂತೆ ಮಾಯಾದನು ನಮ್ಮ ಶಿವ ಕೈಲಾಸ ಸೇರಿಕೊಂಡನು’ ಎಂದು ಹಾಡಿ ಕುಣಿದು ಕುಪ್ಪಳಿಸಿದ ಅ ಅಪ್ಪುವನ್ನು ಯಾರು ತಾನೆ ಮರೆಯಲು ಸಾಧ್ಯ?. 


ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗಕ್ಕೆ ಕಾಲಿಟ್ಟ ಪುನೀತ್ ರಾಜ್ ಕುಮಾರ್ ಅವರು ಇಂದು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅದರಲ್ಲೂ ಫ್ಯಾಮಿಲಿ ಆಡಿಯನ್ಸ್​ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು.

ಪುನೀತ್​ ರಾಜ್​ಕುಮಾರ್​ ಅವರು ಸದ್ಯ ‘ಜೇಮ್ಸ್​’ ಸಿನಿಮಾದ ಕೆಲಸಲ್ಲಿ ಬ್ಯುಸಿಯಾಗಿದ್ದರು.ಚೇತನ್​ಕುಮಾರ್​ ನಿರ್ದೇಶನದ ಸಿನಿಮಾ ಇದಾಗಿತ್ತು. ಇಷ್ಟೇ ಅಲ್ಲದೆ ಪವನ್​ಕುಮಾರ್​ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದಾರೆ. ಆದರೆ ವಿಧಿಯಾಟ ಮಾತ್ರ ಬೇರೆಯೇ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು