6:25 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಕಾನೂನಿಗಿಂತ ದೊಡ್ಡವರು ಯಾರಿಲ್ಲ: ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ: ಸಿಎಂ ಸಿದ್ದರಾಮಯ್ಯ

29/05/2025, 12:35


ಬೆಂಗಳೂರು(reporterkarnataka.com)
: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ lಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೋಮು ಗಲಭೆಗಳನ್ನು ಉಂಟು ಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

*ಡಿಸಿ ಸಿಇಒಗಳೊಂದಿಗೆ ಎರಡು ದಿನ ಸಭೆ:*
ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಡೆಯಲಿರುವ ಡಿಸಿ ಹಾಗೂ ಸಿಇಒ ಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು