ಇತ್ತೀಚಿನ ಸುದ್ದಿ
ಕಾರು- ಬೈಕ್ ನಡುವೆ ಭೀಕರ ಅಪಘಾತ: ಹೊಸದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಸಾವು
15/07/2023, 14:14
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.ಕಂ
ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ
ಕಾರು-ಬೈಕ್ ನಡುವೆ ನಡೆದ ಮುಖಾಮುಖಿ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಚಿಕ್ಕಮಗಳೂರಿನಿಂದ ಕಡೂರು ಕಡೆ ತೆರಳುತ್ತಿದ್ದ ಬೈಕ್ ಸವಾರರಾದ ಹೊಸದುರ್ಗ ಮೂಲದ ಲೋಹಿತ್ (33) ಹಾಗೂ ನಾಗರಾಜ್ (35) ಅವರು ಮೃತ ದುರ್ದೈವಿಗಳು. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.