9:37 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಕಾಟಿಪಳ್ಳ: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ; ಮಾಹಿತಿ ಸಿಕ್ಕಿದವರು ಪೊಲೀಸರ ಸಂಪರ್ಕಿಸಿ

29/03/2022, 09:56

ಮಂಗಳೂರು(reporterkarnataka.com):- ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸವಿದ್ದ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ.

ಭಾರತಿ ಮಾದರ (35) ಎಂಬವರು  ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ- ಭಾರತಿ ಮಾದರ: ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು ತುಳು ಭಾಷೆ ಅರ್ಥವಾಗುತ್ತದೆ. ಕಾಣೆಯಾಗುವ ಸಮಯದಲ್ಲಿ ಹಳದಿ ಬಣ್ಣದಲ್ಲಿ ಕೆಂಪು ಚುಕ್ಕೆಗಳಿರುವ ಸೀರೆ ಹಾಗೂ ಕಪ್ಪು ಬಣ್ಣದ ರವಿಕೆ ಧರಿಸಿರುತ್ತಾರೆ.

ಅಮೃತಾ: 3 ಅಡಿ 5ಇಂಚು ಎತ್ತರ, 5ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಧೋತಿ ಪ್ಯಾಂಟ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾಳೆ.

ಗಣೇಶ: 3 ಅಡಿ ಎತ್ತರ, 3ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.

ಈ ತಾಯಿ ಮಕ್ಕಳು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, ಮೊ.ಸಂಖ್ಯೆ:- 9480805360, 9480802345, ಕಂಟ್ರೋಲ್ ರೂಂ: 0824-2220800 ಮೂಲಕ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      *

ಇತ್ತೀಚಿನ ಸುದ್ದಿ

ಜಾಹೀರಾತು