8:26 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಕಾಟಿಪಳ್ಳ ಮಸೀದಿಗೆ ಕಲ್ಲುತೂರಾಟ ಪ್ರಕರಣ: 5 ಮಂದಿ ಆರೋಪಿಗಳ ಬಂಧನ

16/09/2024, 19:56

ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಕೃಷ್ಣಾಪುರ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಮಸ್ಜಿದುಲ್ ಹುದಾ ಜುಮಾ ಮಸೀದಿಯ ಕಿಟಕಿಗೆ ಕಲ್ಲು ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುರತ್ಕಲ್ ಆಶ್ರಯ ಕಾಲೋನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲೋನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಚಿತ್ ಎಂದು ಗುರುತಿಸಲಾಗಿದೆ.
ಜನತಾ ಕಾಲೋನಿಯ ಸ್ಮಶಾನದ ಕಡೆಯಿಂದ ಭಾನುವಾರ ರಾತ್ರಿ
ಎರಡು ಬೈಕ್ ಗಳಲ್ಲಿ ಆಗಮಿಸಿದ ಕಿಡಿಗೇಡಿಗಳು ಮಸ್ಜಿದುಲ್ ಮಸೀದಿಯ ಹಿಂಭಾಗದ ಕಿಟಕಿಗೆ ಕಲ್ಲು ಎಸೆದಿದ್ದಾರೆ. ಬಳಿಕ ಒಂದು ಬೈಕ್ ನಲ್ಲಿ ಮೂವರು ಗಣೇಶ್ ಕಟ್ಟೆಯ ಕಡೆ ತೆರಳಿದ್ದರು. ಮತ್ತೊಂದು ಬೈಕ್ ನಲ್ಲಿದ್ದ ಮತ್ತಿಬ್ಬರು ವಾಪಸ್ ಸ್ಮಶಾನದ ಕಡೆಗೆ ಬೈಕ್ ಚಲಾಯಿಸಿ ಪರಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು