1:04 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕಬ್ಬಿನ ಗದ್ದೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ 2 ವರ್ಷದ ಹೆಣ್ಣು ಮಗು ಪತ್ತೆ: ಗ್ರಾಮಸ್ಥರಿಂದ ರಕ್ಷಣೆ

23/09/2021, 18:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ  ಗ್ರಾಮದ ಕೃಷ್ಣಾ ನದಿ ಪಕ್ಕದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಸುಮಾರು ಎರಡು ವರ್ಷದ ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಸಹಾಯದಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ  ದಾಖಲಿಸಲಾಗಿದೆ


ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಸ್ಥರೆಲ್ಲ ಸೇರಿ ಆ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ

ನಂತರದಲ್ಲಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯಾದ ನಿರ್ಮಲಾ ಬನಸೋಡೆ ಮಾತನಾಡಿ ಬಾಲಕಿಯು ಈಗ ಚೇತರಿಸಿಕೊಳ್ಳುತ್ತಿದ್ದು ದೇಹದಲ್ಲಿ ಸ್ವಲ್ಪ ಸುಟ್ಟ ಗಾಯಗಳಾಗಿದ್ದು ಆದಷ್ಟು ಬೇಗ ಈ ಮಗು ಗುಣಮುಖವಾಗುತ್ತದೆ ಎಂದರು 

ಇದೇ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಸ್ಥಳೀಯ ಗ್ರಾಮಸ್ಥರ ನೆರವಿನಿಂದ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ. ಈಕೆ ಎಲ್ಲಿಯವಳು? ಕಬ್ಬಿನ ಗದ್ದೆಗೆ ಕರೆದು ತಂದವರು ಯಾರು? ಇದೆಲ್ಲ ಅಂಶ ತನಿಖೆಯಿಂದ ತಿಳಿದು ಬರಬೇಕಾಗಿದೆ.ಅಥಣಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು