8:31 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಿಂದ ಪತ್ತೆಯಾಗಿದ್ದ ಹೆಣ್ಣು ಮಗು: ಪಾಪಿ ಹೆತ್ತವರು ಪತ್ತೆಯಾಗುವ ಮುನ್ನವೇ ಸಾವು

01/10/2021, 20:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ತೋಟದಲ್ಲಿ ಪ್ರಜ್ಞಾಹೀನಾವಸ್ಥೆಯಲ್ಲಿ ಪತ್ತೆಯಾಗಿದ್ದ 2 ವರ್ಷದ ಹೆಣ್ಣು ಮಗು ಪೋಷಕರನ್ನು ಪತ್ತೆ ಹಚ್ಚುವ ಮುನ್ನವೇ ಸಾವನ್ನಪ್ಪಿದ ದುಃಖಕರ ಘಟನೆ ನಡೆದಿದೆ.

ಒಂದು ವಾರದ ಹಿಂದೆ ಅಥಣಿ – ಗೋಕಾಕ್ ರಸ್ತೆಯ ಕೃಷ್ಣ ಸೇತುವೆ ಬಳಿಯ ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಲ್ಲಿ ಮಗು ಪತ್ತೆಯಾಗಿತ್ತು. ಸ್ಥಳೀಯರು ಮಗುವನ್ನು ರಕ್ಷಿಸಿ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಕುರಿತು ಅಥಣಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇಲ್ಲಿಯವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದರೆ ಪೋಷಕರ ಮಾಹಿತಿ ಸಿಗುವ ಮುಂಚೆ ಮಗು ಇಹಲೋಕ ತ್ಯಜಿಸಿದೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ಗುರುತಿಗೆ ಎಫ್‌ಎಸ್‌ಎಲ್ ಬೆಂಗಳೂರಿಗೆ ಸ್ಯಾಂಪಲ್ ರವಾನಿಸಿದ್ದರು. ವಿಡಿಯೋ ಕ್ಲಿಯರ್ ಇಲ್ಲದಕ್ಕೆ ಸ್ಯಾಂಪಲ್ ಎಫ್‌ಎಸ್‌ಎಲ್ ರಿಜೆಕ್ಟ್ ಮಾಡಿತ್ತು. ಸಧ್ಯ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ಶಿಪ್ಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು