10:46 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ: ವ್ಯಕ್ತಿ ಸ್ಥಳದಲ್ಲೇ ದಾರುಣ ಸಾವು

08/08/2024, 23:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಬ್ಬಿಣದ ಏಣಿಯನ್ನ ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗದ್ಗಲ್ ಗ್ರಾಮದ ಬಳಿ ನಡೆದಿದೆ.
ಮೃತನನ್ನ 48 ವರ್ಷದ ಪ್ರಸನ್ನ ಸಾಲ್ಡನ್ ಎಂದು ಗುರುತಿಸಲಾಗಿದೆ. ಮೃತ ಪ್ರಸನ್ನ ಮನೆಯಲ್ಲಿ ಬೇರೆ ಕೆಲಸದ ನಿಮಿತ್ತ ಕಾಫಿ ತೋಟದಿಂದ ಕಬ್ಬಿಣದ ಏಣಿಯನ್ನ ಮನೆಗೆ ತಂದಿದ್ದರು. ಕೆಲಸವಾದ ಬಳಿಕ ಏಣಿಯನ್ನ ಮತ್ತೆ ಕಾಫಿ ತೋಟಕ್ಕೆ ಇಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಬ್ಬಿಣದ ಏಣಿಯಾದ ಕಾರಣ ವಿದ್ಯುತ್ ಸ್ಪರ್ಶಿಸಿದ ಕೂಡಲೇ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ. ಮನೆಯಿಂದ ಏಣಿಯನ್ನ ಕೊಂಡೊಯ್ಯುವಾಗ ಗಬ್ಗಲ್ ಗ್ರಾಮದ ಶಾಲೆ ಪಕ್ಕ ಎತ್ತರದ ಪ್ರದೇಶದಲ್ಲಿ ಏಣಿಯನ್ನ ಹೊತ್ತುಕೊಂಡು ಹೋಗುವಾಗ ಏಣಿ ವಿದ್ಯುತ್ ತಂತಿಗೆ ತಗುಲಿ ಸಾವನಪ್ಪಿದ್ದಾರೆ. ಮಲೆನಾಡ ಭಾರೀ ಗಾಳಿ-ಮಳೆಗೆ ವಿದ್ಯುತ್ ತಂತಿಗಳು ಕೂಡ ಜಗ್ಗಿದ್ದವು. ಅತ್ಯಂತ ಕೆಳಭಾಗದಲ್ಲಿ ಇದ್ದ ವಿದ್ಯುತ್ ತಂತಿಗಳಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು