10:05 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಾಡಾನೆ ನಾಡಿಗೆ ಬರುವುದನ್ನು ತಡೆಯಲು ಆದ್ಯತೆಯ ಮೇಲೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ಅರಣ್ಯ ಸಚಿವರ ಭರವಸೆ

06/10/2023, 10:46

ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು, ಕೊಣಾಜೆ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಮರಳಿಸುವಂತೆ ಮತ್ತು ನಾಡಿಗೆ ಬಾರದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸುಳ್ಯ ಶಾಸಕರಿಗೆ ಭರವಸೆ ನೀಡಿದ್ದಾರೆ.
ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಮನವಿ ಸ್ವೀಕರಿಸಿದ ಸಚಿವರು, ಈ ವರ್ಷ ಮಳೆಯ ಪ್ರಮಾಣ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ನೀರು, ಆಹಾರ ಅರಸಿ ಆನೆಗಳು ಕಾಫಿ ತೋಟಗಳಿಗೆ ಬರುತ್ತಿವೆ. ಆನೆಗಳು ನಾಡಿಗೆಬಾರದಂತೆ ತಡೆಯಲು ರೈಲ್ವೆ ಬ್ಯಾರೀಕೇಡ್ ನಿರ್ಮಾಣವೇ ಪರಿಹಾರವಾಗಿದ್ದು, ಆದ್ಯತೆಯ ಮೇಲೆ ಈ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಅರಣ್ಯದೊಳಗೆ ಆನೆಗಳಿಗೆ ನೀರು ಆಹಾರ ಸಿಗುವಂತೆ ಕ್ರಮ ವಹಿಸಲೂ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು