4:35 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಡಬ: ಪತ್ನಿಯ ಕೊಂದು ಪತಿ ಆತ್ಮಹತ್ಯೆ ಶರಣು: 2 ವರ್ಷದ ಹೆಣ್ಣು ಮಗು ಅನಾಥ

22/06/2026, 18:01

ಕಡಬ(reporterkarnataka.com): ಅಲಂಕಾರು ಗ್ರಾಮದ ಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಪತ್ನಿಯನ್ನು ಕೊಂದು, ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದಂಪತಿಯ ಎರಡು ವರ್ಷದ ಹೆಣ್ಣು ಮಗು ಇದೀಗ ಅನಾಥವಾಗಿದೆ.
ಕಜೆ ನಿವಾಸಿಗಳಾದ ದಿನೇಶ್ ಪೂಜಾರಿ (45) ಹಾಗೂ ಸಂಗೀತಾ (40) ಮೃತರು. ಸಂಗೀತಾ ಅವರ ಸಂಬಂಧಿ ಸುಮಲತಾ ದೂರು ನೀಡಿದ್ದು, ಕಡಬ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಂದೆ ತಾಯಿಯನ್ನು ಕಳೆದುಕೊಂಡ ಹೆಣ್ಣು ಮಗು (ಧೃವಿ) ಅಳುತ್ತಿರುವ ದೃಶ್ಯ ಕರುಳು ಕಿವುಚುವಂತಿತ್ತು.
‘ದಿನೇಶ್ ಮತ್ತು ಸಂಗೀತಾ ಕಜೆ ಗ್ರಾಮದ ಬಾಡಿಗೆ ಮನೆಯಲ್ಲಿ ಮಗುವಿನೊಂದಿಗೆ ವಾಸವಿದ್ದರು. ಆಲಂಕಾರು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ಶನಿವಾರ ಸಂಗೀತಾ ಅವರ ಮೊಬೈಲ್‌ಗೆ ತವರು ಮನೆಯವರು ಕರೆ ಮಾಡಿದ್ದರೂ ಪ್ರತಿಕ್ರಿಯೆ ಬಂದಿರಲಿಲ್ಲ. ಇವರ ಮನೆಯ ಪಕ್ಕದ ಮನೆವರಿಗೆ ಸಂಗೀತಾ ತಾಯಿ ಕರೆ ಮಾಡಿ ವಿಷಯ ತಿಳಿಸಿದ್ದರು. ನೆರೆಮನೆಯವರು ಪರಿಶೀಲಿಸಿದಾಗ ಮನೆಯ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಲಾಗಿತ್ತು. ಕಿಟಕಿಗಳನ್ನು ಭದ್ರವಾಗಿ ಮುಚ್ಚಲಾಗಿತ್ತು. ಮಗು ಅಳುವ ಸದ್ದು ಕೇಳಿಸುತ್ತಿತ್ತು. ಅವರು ಊರಿನವರಿಗೆ ವಿಷಯ ತಿಳಿಸಿದ್ದರು. ಬಾಗಿಲು ಒಡೆದು ನೋಡಿದಾಗ ದಿನೇಶ್ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಂಗೀತಾ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು’ ಎಂದು ಸ್ಥಳೀಯರು ತಿಳಿಸಿದ್ದಾರೆ.
ದಿನೇಶ್ ಮತ್ತು ಸಂಗೀತಾ ದಂಪತಿ ಉಡುಪಿ ಜಿಲ್ಲೆಯ ಕಾರ್ಕಳದ ಬಜಗೋಳಿ ನಿವಾಸಿಗಳಾಗಿದ್ದು, ವರ್ಷದ ಹಿಂದೆ ಆಲಂಕಾರಿಗೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆಲಂಕಾರು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ಒಂದು ತಿಂಗಳಿನಿಂದ ಹೊಟೇಲ್ ಮುಚ್ಚಿತ್ತು. ದಂಪತಿ ಊರಿಗೆ ತೆರಳಿದ್ದರು. ಶುಕ್ರವಾರವಷ್ಟೇ ಆಲಂಕಾರಿನ ಬಾಡಿಗೆ ಮನೆಗೆ ಮರಳಿದ್ದರು ಎಂದು ಗೊತ್ತಾಗಿದೆ.
‘ಮಗುವಿನ 90 ಸಾವಿರ ಮೊತ್ತದ ಚಿನ್ನದ ಸರ ಕಳೆದು ಹೋಗಿತ್ತು. ಈ ವಿಚಾರವಾಗಿ ದಿನೇಶ್ ತನ್ನ ಹೆಂಡತಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ. ಸರವನ್ನು ಹುಡುಕಲು ಅವರು ಆಲಂಕಾರಿನ ಬಾಡಿಗೆ ಮನೆಗೆ ಶುಕ್ರವಾರ ಮರಳಿದ್ದರು. ಈ ವಿಚಾರವಾಗಿಯೇ ಅಳಿಯ ನನ್ನ ಮಗಳನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ. ಹಿಂದೆಯೂ ಒಮ್ಮೆ ಆತ ಕುತ್ತಿಗೆಗೆ ಬಟ್ಟೆ ಸುತ್ತಿ ಮಗಳನ್ನು ಕೊಲೆ ಮಾಡಲು ಯತ್ನಿಸಿದ್ದ’ ಎಂದು ಮೃತ ಸಂಗೀತಾ ಅವರ ತಾಯಿ ತುಂಗಮ್ಮ ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭೂಮ ರೆಡ್ಡಿ, ಡಿವೈಎಸ್ಪಿ ರೋಹಿಣಿ, ಉಪ್ಪಿನಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ನಾಗರಾಜ್, ಕಡಬ ಠಾಣಾಧಿಕಾರಿ ಜಂಬೂರಾಜ್ ಮಹಾಜನ್ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಡಬ ಠಾಣೆಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು