4:50 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಡಬ: ಕಾಡಾನೆ ಅಟ್ಟಹಾಸ; ಸಲಗ ದಾಳಿಗೆ ಯುವತಿ ಸೇರಿ 2 ಮಂದಿ ದಾರುಣ ಸಾವು

20/02/2023, 16:58

ಕಡಬ(reporterkarnataka.com): ಮಲೆನಾಡು ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದ ಕಾಡಾನೆ ಹಾವಳಿ ಇದೀಗ ಕರಾವಳಿ ಜಿಲ್ಲೆಯಾದ ದ.ಕ.ಕ್ಕೂ ತಟ್ಟಿದೆ. ಕರಾವಳಿಯ ಅರೆ ಮಲೆನಾಡಿನಿಂದಾವೃತವಾಗಿರುವ ಕಡಬ ಸಮೀಪದ ಕುಟ್ರುಪಾಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಈ ದುರ್ಘಟನೆ ಸೋಮವಾರ ನಡೆದಿದೆ.

ಮೃತರನ್ನು ರಂಜಿತಾ (21) ಹಾಗೂ ರಮೇಶ್ ರೈ(55) ಎಂದು ಗುರುತಿಸಲಾಗಿದೆ. ರಂಜಿತಾ ಪೇರಡ್ಕ ಹಾಲು ಉತ್ಪಾದಕ ಸೊಸೈಟಿಯಲ್ಲಿ ಸಿಬ್ಬಂದಿ ಆಗಿದ್ದು, ಬೆಳಗ್ಗೆ ಎಂದಿನಂತೆ ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕರ್ಮೇಣ ಎಂಬಲ್ಲಿ ಅವರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಅವರು ಬೊಬ್ಬೆ ಹಾಕಿಕೊಳ್ಳುವುದನ್ನು ಕೇಳಿ ಅಲ್ಲೇ ಪಕ್ಕದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಅವರು ರಂಜಿತಾ ಅವರನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅವರ ಮೇಲೂ ಆನೆ ದಾಳಿ ನಡೆಸಿದೆ. ಹೊಟ್ಟೆ ಭಾಗಕ್ಕೆ ತಿವಿತದ ಪರಿಣಾಮ ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ರಂಜಿತಾರನ್ನು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಅಷ್ಟರಲ್ಲಿ ಮೃತಪಟ್ಟಿದ್ದರು ಎಂಬ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು