ಇತ್ತೀಚಿನ ಸುದ್ದಿ
ಕಡಬ: ಮಾವನಿಂದಲೇ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಕಾಯ್ದೆಯಡಿ ಆರೋಪಿ ಸೆರೆ
14/09/2022, 13:06
ಕಡಬ(reporterkarnataka.com): ಮಾವನೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭ ವತಿ ಮಾಡಿದ ಆಘಾತಕಾರಿ ಘಟನೆ ಕಡಬ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಆರೋಪಿಯು ತನ್ನ ಸಂಬಂಧಿಕಳಾದ 17 ವರ್ಷದ ಬಾಲಕಿಯ ಮೇಲೆ ಮನೆಯಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ಅತ್ಯಾಚಾರ ಮಾಡುತ್ತಿದ್ದ ಎನ್ನಲಾಗಿದೆ. ಇದರ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಈ ಬಗ್ಗೆ ಆಶಾ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದಾಗ ವಿಷಯ ಹೊರಬಂದಿದೆ.
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.














