6:05 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕಡಲನಗರಿಯಿಂದ ದಿಲ್ಲಿಗೆ ನೇರ ವಿಮಾನ ಯಾನ ಸೇವೆ ಆರಂಭ: ಮಂಗಳೂರಿಗರ ಬಹುದಿನಗಳ ಕನಸು ನನಸು

02/07/2022, 20:02

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಿಂದ ರಾಷ್ಟ್ರದ ರಾಜಧಾನಿ ದೆಹಲಿ ನಡುವೆ ನೇರ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಇದರೊಂದಿಗೆ ಕುಡ್ಲ – ದೆಹಲಿ ನಡುವೆ ವಿಮಾನಯಾನ ಸೇವೆ ಆರಂಭಿಸಬೇಕೆಂಬ ಹಲವು ದಿನಗಳ ಬೇಡಿಕೆ ಕೊನೆಗೂ ಈಡೇರಿದೆ.

ಇಂಡಿಗೋ ವಿಮಾನ ಸಂಸ್ಥೆಯು ತನ್ನ ಮೊದಲ ಸಂಚಾರವನ್ನು ಶುಕ್ರವಾರ ಆರಂಭಿಸಿದೆ.

ದಿಲ್ಲಿಯಿಂದ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಅದೇ ರೀತಿ 140 ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಹೊತ್ತೊಯ್ದ ವಿಮಾನವು 10.40ಕ್ಕೆ ಮರಳಿ ದಿಲ್ಲಿ ತಲುಪಿದೆ.

ವಾರದಲ್ಲಿ ಸೋಮವಾರ , ಬುಧವಾರ, ಶುಕ್ರವಾರ ಹಾಗೂ ಭಾನುವಾರ ಸೇರಿದಂತೆ ವಾರದಲ್ಲಿ ನಾಲ್ಕು ದಿನಗಳಲ್ಲಿ ಈ ವಿಮಾನ ಸಂಚಾರ ಇರಲಿದೆ. ಈಗಾಗಲೇ ಮಂಗಳೂರು-ಪೂನಾ-ದಿಲ್ಲಿ ನಡುವೆ ವಿಮಾನ ಸಂಚಾರ ನಡೆಯುತ್ತಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನು ದಿಲ್ಲಿ ನೇರ ವಿಮಾನದಿಂದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು