2:45 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ: ಕ್ಲಾಕ್ ಟವರ್ ನಿಂದ ಆರಂಭ

29/04/2023, 19:32

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಅವರು ಶನಿವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ಬಿಗಿ ಬಂದೋಬಸ್ತ್ ನಡುವೆ ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಅಮಿತ್ ಶಾ ಅವರ ರೋಡ್ ಶೋ ಆರಂಭವಾಯಿತು. ರಸ್ತೆಯ ಇಕ್ಕಡೆಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಅಮಿತ್ ಶಾ ಅವರು ರಸ್ತೆಯ ಎರಡೂ ಬದಿಗಳಲ್ಲಿ ನೆರೆದಿದ್ದ ಸಾವಿರಾರು ಜನರತ್ತ ಕೈಬೀಸಿದರು. ಕ್ಲಾಕ್ ಟವರ್ ನಿಂದ ಸಂಜೆ 6.35ಕ್ಕೆ ರೋಡ್ ಶೋ ಆರಂಭವಾಯಿತು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,‌ ಪಕ್ಷದ ಅಭ್ಯರ್ಥಿ ಗಳಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಸತೀಶ್ ಕುಂಪಲ, ಉಮಾನಾಥ ಕೋಟ್ಯಾನ್, ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್ ಮುಂತಾದವರು ಉಪಸ್ಥಿತರಿದ್ದರು.


ಕ್ಲಾಕ್ ಟವರ್ ನಿಂದ ಆರಂಭವಾದ ರೋಡ್ ಶೋ
ಕೊಡಿಯಾಲ್‌ಬೈಲ್‌ನ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ಬಳಿ ಸಮಾಪ್ತಿಗೊಂಡಿತು. ಗೋವಿಂದ ಪೈ ಸರ್ಕಲ್ ಬಳಿ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು.
ರೋಡ್ ಶೋ ಹಿನ್ನೆಲೆಯಲ್ಲಿ ನಗರದ ಕ್ಲಾಕ್ ಟವರ್ ಪ್ರದೇಶವನ್ನು ಕೇಸರಿಮಯ ಮಾಡಲಾಗಿತ್ತು. ಕ್ಲಾಕ್ ಟವರ್ ಸುತ್ತ ಬಿಜೆಪಿ ಬಾವುಟ ಹಾರುತ್ತಿತ್ತು.
ಶಾ ಭೇಟಿ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿತ್ತು. ವಾಹನಗಳ ಸಂಖ್ಯೆ ಇಳಿಮುಖವಾಗಿತ್ತು. ಹಂಪನಕಟ್ಟೆ ಪ್ರದೇಶದ ಅಂಡರ್ ಪಾಸ್ ನ ಬಾಗಿಲು ಹಾಕಿ ಮುಚ್ಚಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು