ಇತ್ತೀಚಿನ ಸುದ್ದಿ
ಕಡಲನಗರಿ ಮಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಹಾಲಿ, ಮಾಜಿ ಮುಖ್ಯಮಂತ್ರಿಗಳು ಸಾಥ್
11/02/2023, 19:08

ಮಂಗಳೂರು(reporter Karnataka.com): ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಸಂಜೆ ಮಂಗಳೂರಿನ ಕೆಂಜಾರಿಗೆ ಆಗಮಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕಾದ ಡಾ. ವೈ. ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್ ಹಾಗೂ ಇತರರು ಭಾಗವಹಿಸಿದ್ದರು.
ಇದಕ್ಕೆ ಮುನ್ನ ಗೃಹಸಚಿವರು ಪುತ್ತೂರು ಸಮೀಪದ ಈಶ್ವರಮಂಗಲ ಹಾಗೂ ಪುತ್ತೂರಿನ ಕ್ಯಾಂಪ್ಕೋ ಕಾರ್ಯಕ್ರಮದಲ್ಲಿ ಭಾಗವಹಿಸಿದರು.