ಇತ್ತೀಚಿನ ಸುದ್ದಿ
ಕಡಲನಗರಿ ಮಂಗಳೂರಿನಲ್ಲಿ 77ನೇ ಸ್ವಾತಂತ್ರ್ಯೋತ್ಸವ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ: ಗೌರವ ವಂದನೆ ಸ್ವೀಕಾರ
15/08/2023, 09:44
ಕಡಲನಗರಿ ಮಂಗಳೂರಿನಲ್ಲಿ 77ನೇ ಸ್ವಾತಂತ್ರ್ಯೋತ್ಸವ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ: ಗೌರವ ವಂದನೆ ಸ್ವೀಕಾರ
ಮಂಗಳೂರು(reporterkarnataka.com):- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪಾಲಿಕೆ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ, ಕಾರ್ಪೋರೇಟರ್ ಹಾಗೂ ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್,
ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.