5:45 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಮೇಳೈಸಿದ ಕುಡ್ಲದ ಪಿಲಿಪರ್ಬ-2024 ಸೀಸನ್ 3: ತುಳುನಾಡಿನ ಗತವೈಭವದ ಘನ ಪರಂಪರೆ ಮತ್ತೊಮ್ಮೆ ಮೆಲುಕು

11/10/2024, 22:14

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ
ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3ರ ಉದ್ಘಾಟನಾ ಸಮಾರಂಭ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಪಿಲಿಪರ್ಬ ಮೇಳೈಸಿತು.ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು, ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 10 ಹುಲಿವೇಷ ತಂಡಗಳಿಗೂ ಗಣ್ಯರು ಶುಭ ಹಾರೈಸಿ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತವನ್ನು ಕೋರಿದರು.


ಸ್ಪರ್ಧಾಕೂಟವು ಇಂದು ರಾತ್ರಿಯವರೆಗೂ ಅದ್ದೂರಿಯಾಗಿ ಸಾಗಿದ್ದು, ಅಂತಿಮವಾಗಿ ವಿಜೇತ ತಂಡದ ಘೋಷಣೆಯಾಗಲಿದೆ. ಈ ನಡುವೆ ವೀಕ್ಷಕರಿಗಾಗಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ ಸೇರಿದಂತೆ ಮ.ನ.ಪಾ ಸದಸ್ಯರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು