4:57 PM Friday22 - August 2025
ಬ್ರೇಕಿಂಗ್ ನ್ಯೂಸ್
ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿಗೆ ಭವ್ಯ ಸ್ವಾಗತ: ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ಮೇಯರ್ 

19/07/2022, 18:37

ಮಂಗಳೂರು(reporterkarnataka.com): 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿ ಜಿಲ್ಲೆಗೆ ಆಗಮಿಸಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಭಿಪ್ರಾಯಪಟ್ಟರು. 

ಅವರು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಬೆಳಗ್ಗೆ 44ನೇ ಚೆಸ್ ಒಲಿಂಪಿಯಾಡ್‍ನ ರಿಲೇ ಜ್ಯೋತಿಯನ್ನು ಸ್ವಾಗತಿಸಿ ಮಾತನಾಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿಯ ಆಗಮನವಾಗುತ್ತಿದೆ, ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಹಾಗೂ 75 ಜಿಲ್ಲಾ ಕೇಂದ್ರಗಳಲ್ಲಿ ಒಲಂಪಿಯಾಡ್ ರಿಲೇ ಜ್ಯೋತಿ ಸಂಚರಿಸಲಿದೆ. ರಾಜ್ಯದ ಬೆಂಗಳೂರು ಮತ್ತು ಮಂಗಳೂರಿಗೆ ಈ ಸುವರ್ಣಾವಕಾಶ ದೊರೆತಿರುವುದು ಸೌಭಾಗ್ಯವಾಗಿದೆ. ಇಂದು ಬೆಳಗಿದ ಕ್ರೀಡಾ ಜ್ಯೋತಿ ದೇಶದಾದ್ಯಂತ ಇನ್ನಷ್ಟು ಪ್ರತಿಭೆಗಳ ಬದುಕಿಗೆ ಬೆಳಕು ನೀಡಲಿ ಎಂದು ಅವರು ಹರ್ಷ ವ್ಯಕ್ತಪಡಿಸಿದರು. 

ಭಾರತದಲ್ಲೇ ಜನ್ಮ ತಾಳಿದ ಈ ಕ್ರೀಡೆಗೆ ಕೇಂದ್ರ ಸರ್ಕಾರ ಅದ್ದೂರಿ ಬೆಂಬಲ ನೀಡುತ್ತಿರುವುದು ಸಂತಸದ ಸಂಗತಿ. ದೇಶದಲ್ಲಿ ಮೊದಲ ಬಾರಿಗೆ ಚೆಸ್ ಒಲಂಪಿಯಾಡ್ ಟಾರ್ಚ್ ರಿಲೇ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.


ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಇದಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಇನ್ನಷ್ಟು ಪ್ರತಿಭಾವಂತ ಯುವ ಜನರು ಈ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.

ಕರ್ಣಾಟಕ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಮಾತನಾಡಿ, ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆಗಳಲ್ಲಿ ಚದುರಂಗದಾಟವು ಒಂದು. ಅದು ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತಿದೆ. ಸರ್ಕಾರದ ಇದಕ್ಕೆ ನೀಡುತ್ತಿರುವ ಪ್ರೋತ್ಸಾಹದಿಂದಾಗಿ ಚೆಸ್ ದ್ರುವತಾರೆಗಳು ಬೆಳಕಿಗೆ ಬರಲಿದ್ದಾರೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಯೆನೆಪೋಯ ಉಪ ಕುಲಪತಿ ಡಾ.ಎಂ. ವಿಜಯ ಕುಮಾರ್, ಗ್ರಾಂಡ್ ಮಾಸ್ಟರ್‍ಗಳಾದ ತೇಜ ಕುಮಾರ್, ಜಿ.ಎ ಸ್ಟಾನಿ, ಚೆಸ್ ಫೆಡರೇಷನ್ ಅಧ್ಯಕ್ಷ ರಮೆಶ್ ಕೋಟೆ, ಎನ್.ಎಸ್.ಎಸ್ ಪ್ರೋಗ್ರಾಂ ಕೋ-ಆರ್ಡಿನೇಟರ್ ಡಾ.ಅಶ್ವಿನಿ ಶೆಟ್ಟಿ, ನೆಹರೂ ಯುವ ಕೇಂದ್ರದ ಅಧಿಕಾರಿಗಳಾದ ವಿಷ್ಣುಮೂರ್ತಿ,  ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್, ಭಾರತೀಯ ಚೆಸ್ ಫೆಡರೇಷನ್‍ನ ಜಿಲ್ಲಾಧ್ಯಕ್ಷ ರಾಜಗೋಪಾಲ್ ಶೆಣೈ, ನೆಹರು ಯುವ ಕೇಂದ್ರದ ಜಿಲ್ಲಾ ಅಧಿಕಾರಿ ರಘುವೀರ್ ಸೂಟರ್ ಪೇಟೆ ಸೇರಿದಂತೆ, ಎನ್.ಸಿ.ಸಿ, ಮಂಗಳೂರು ವಿಶ್ವ ವಿದ್ಯಾನಿಲಯ ಹಾಗೂ ಯೇನಾಪೋಯ ವಿಶ್ವ ವಿದ್ಯಾ ನಿಲಯದ ಎನ್.ಎಸ್. ಎಸ್ ಸ್ವಯಂ ಸೇವಕರು , ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು