ಇತ್ತೀಚಿನ ಸುದ್ದಿ
ಕಡಲನಗರಿಯಲ್ಲಿ ಯೋಗ ವೈಭವ: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
21/06/2023, 09:52

ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ಪಿ ರಿಷ್ಯಂತ್, ಡಿಎಚ್ ಒ ಡಾ. ಕಿಶೋರ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ, ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ, ಎಸಿಪಿ ಗೀತಾ ಕುಲಕರ್ಣಿ ವೇದಿಕೆಯಲ್ಲಿದ್ದರು.
ಹೋಂ ಗಾಡ್೯, ಯೋಗ ಸಂಘಟನೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜಿಲ್ಲಾ ಆಯುಷ್ ಅಧಿಕಾರಿ ಮಹಮದ್ ಇಕ್ಬಾಲ್ ಸ್ವಾಗತಿಸಿದರು.