4:57 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲೇ ಗೃಹ ಸಚಿವ ಅಮಿತ್ ಶಾ ರಾತ್ರಿ ವಾಸ್ತವ್ಯ: ವಿಮಾನ ಟೇಕಾಫ್ ಆಗಲೇ ಇಲ್ಲ, ಪ್ರಧಾನ್ ಮಂಗಳೂರಿಗೆ ಬರಲೇ ಇಲ್ಲ!!

30/04/2023, 11:30

ಮಂಗಳೂರು(reporterkarnataka.com):
ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರೋಡ್ ಶೋಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ರಾತ್ರಿಯೇ ಮಂಗಳೂರಿನಿಂದ ನಿರ್ಗಮಿಸಬೇಕಿತ್ತು. ಹಾಗೆ ಶನಿವಾರ ರಾತ್ರಿಯೇ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಆಗಮಿಸಿತ್ತು. ಆದರೆ ಬೆಂಗಳೂರಿನಲ್ಲಿ ಸುರಿದ ಮಳೆ ಇದಕ್ಕೆಲ್ಲ ಕಲ್ಲು ಹಾಕಿತ್ತು.!
ಅಮಿತ್ ಶಾ ಅವರ ರೋಡ್ ಶೋ ಮುಗಿದ ಬಳಿಕ ನಗರದ ರಾಷ್ಟ್ರಕವಿ ಡಾ. ಗೋವಿಂದ ಪೈ ಸರ್ಕಲ್ ಬಳಿ ಇರುವ ಓಶಿಯನ್ ಪರ್ಲ್ ಹೊಟೇಲ್ ನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆಗೆ ಸಂಬಂಧಿಸಿದ ಸಭೆ ನಡೆಯಲಿತ್ತು. ಇದರಲ್ಲಿ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಬಿಜೆಪಿಯ ಅಗ್ರಪಂಕ್ತಿಯ ನಾಯಕರು ಭಾಗವಹಿಸುವವರಿದ್ದರು. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಂಜೆ ವೇಳೆ ಬಂದ ಭಾರಿ ಮಳೆಯಿಂದ ಪ್ರಧಾನ್ ಅವರು ಬರಬೇಕಿದ್ದ ವಿಮಾನ ಟೇಕಾಫ್ ಆಗಲೇ ಇಲ್ಲ. ನಂತರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಅಮಿತ್ ಶಾ ಅವರು ಸಭೆ ನಡೆಸಿದರು. ರಾತ್ರಿ ಮಂಗಳೂರಿನಲ್ಲೇ ತಂಗಿದ್ದ ಅಮಿತ್ ಶಾ ಅವರು ಭಾನುವಾರ ಬೆಳಗ್ಗೆ ನಿರ್ಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು