7:58 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಡಲನಗರಿ ಕುಡ್ಲಕ್ಕೆ ಪ್ರಧಾನಿ: ಸಿದ್ಧಗೊಳ್ಳುತ್ತಿದೆ 2 ಲಕ್ಷ ಮಂದಿ ಆಸೀನರಾಗಬಲ್ಲ ಬೃಹತ್ ಪೆಂಡಾಲ್

28/08/2022, 12:49

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ಮತ್ತೊಂದೆಡೆ
ಕೂಳೂರು ಸಮೀಪದ ಗೋಲ್ಡ್ ಫಿಂಚ್ ಸಿಟಿ ಮೈದಾನಲ್ಲಿ 2 ಲಕ್ಷ ಜನರು ಕುಳಿತು ನೋಡಬಹುದಾದ ಬೃಹತ್ ಪೆಂಡಾಲ್ ನಿರ್ಮಾಣ ಕಾರ್ಯ ನಡೆಯುತ್ತಿದೆ.

ರಸ್ತೆ ತೇಪೆ ಕಾರ್ಯಕ್ಕೆ ಮಂಗಳೂರು ಮಹಾನಗರಪಾಲಿಕೆ ಅನುದಾನ ಬಿಡುಗಡೆ ಮಾಡಿದೆ. ರಸ್ತೆ ದುರಸ್ತಿ ಕಾರ್ಯ ಭರದಲ್ಲಿ ನಡೆಯುತ್ತಿದೆ. ಅದೇ ರೀತಿ ಪಿಡಬ್ಲ್ಯುಡಿಗೆ ಸೇರಿದ ರಸ್ತೆಗಳ ದುರಸ್ತಿ ಕಾಮಗಾರಿ ನಡೆಯುತ್ತಿದೆ.

ಈ ನಡುವೆ ಎನ್ಎಂಪಿಟಿಯಲ್ಲಿ ಲೋಕಾರ್ಪಣೆಗೊಳ್ಳಲಿರುವ ವಿವಿಧ ಯೋಜನೆಗಳ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಎನ್ಎಂಪಿಟಿ
ಕಾರ್ಯಕ್ರಮದ ನಂತರ ಪ್ರಧಾನಿ ಗೋಲ್ಡ್ ಫಿಂಚ್ ಸಿಟಿ ಮೈದಾನಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದಕ್ಕಾಗಿ ಇಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಕಾರ್ಯ ನಡೆಯುತ್ತಿದೆ. 2 ಲಕ್ಷ ಜನರು ಆಸೀನರಾಗಲು ಬೇಕಾಗುವ ಪೆಂಡಲ್ ನಿರ್ಮಾಣ ಕಾಮಗಾರಿ ಕೆಲಸ ನಡೆಯುತ್ತಿದೆ. ಇದರೊಂದಿಗೆ ಬೃಹತ್ ವೇದಿಕೆ ನಿರ್ಮಾಣವೂ ಆಗುತ್ತಿದೆ.80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರದ ವೇದಿಕೆಯನ್ನು ಸಿದ್ಧಗೊಳ್ಳುತ್ತಿದೆ. ಸಭೆಯಲ್ಲಿ ಪಾಲ್ಗೊಂಡವರಿಗೆ ನೀರಿನ, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ.ವಾಹನಗಳ ಪಾರ್ಕಿಂಗ್ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು