2:06 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಕ್ರಿಸ್ಮಸ್ ಸಂಭ್ರಮ; ದೇವರ ನಿಜವಾದ ಭಾಷೆಯೇ ಪ್ರೀತಿ: ಡಾ. ಬಿಷಪ್ ಪೀಟರ್ ಪಾವ್ಲ್

25/12/2024, 10:45

ಮಂಗಳೂರು(reporterkarnataka.com):ದೇವರು ಕೋಪ, ದ್ವೇಷದ ಮಾತುಗಳನ್ನು ಎಲ್ಲಿಯೂ ಆಡಿಲ್ಲ. ಅವರು ಪ್ರೀತಿಯ ಮಾತುಗಳನ್ನೇ ಹೇಳುತ್ತಾ ಸಾಗಿದರು.ದೇವರು ಪ್ರೀತಿಯ ಭಾಷೆಯಲ್ಲಿ ಮಾತನಾಡುತ್ತಾರೆ. ಪ್ರೀತಿಗೆ ಹೆಚ್ಚು ಮಹತ್ವ ಕೊಡುವ ಮೂಲಕ ನಾವು ಸಮಾಜದಲ್ಲಿರುವ ನೆರೆಹೊರೆಯವರ ಜತೆಗೆ ಪ್ರೀತಿಯನ್ನು ಹಂಚುವ ಕೆಲಸ ಮಾಡಬೇಕು ಎಂದು ಹಬ್ಬದ ಮೂಲಕ ಯೇಸು ಸಾರುತ್ತಾರೆ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಹೇಳಿದರು.
ಅವರು ನಗರದ ರೊಸಾರಿಯೋ ಕೆಥೆಡ್ರಲ್‍ನಲ್ಲಿ ಕ್ರಿಸ್ಮಸ್ ಹಬ್ಬದ ವಿಶೇಷ ಬಲಿಪೂಜೆಯ ನೇತೃತ್ವ ವಹಿಸಿ ಆಶೀರ್ವಚನ ನೀಡುತ್ತಾ, ಕ್ರೈಸ್ತ ಪವಿತ್ರಗ್ರಂಥಗಳಲ್ಲಿ ದೇವರು ಕೋಪ, ದ್ವೇಷದ ಮಾತುಗಳನ್ನು ಎಲ್ಲಿಯೂ ಆಡಿಲ್ಲ. ಅವರು ಪ್ರೀತಿಯ ಮಾತುಗಳನ್ನೇ ಹೇಳುತ್ತಾ ಸಾಗಿದರು. ಗೋದಲಿಯಲ್ಲಿ ಶ್ರೀಸಾಮಾನ್ಯರಂತೆ ಹುಟ್ಟಿದ ಯೇಸು ಜಗತ್ತಿನಲ್ಲಿ ತನ್ನ ಸರಳತೆಯ ಮೂಲಕ ಪ್ರೀತಿ, ಶಾಂತಿ, ನೆಮ್ಮದಿ ಜತೆಗೆ ಕ್ಷಮಿಸುವ ಗುಣವನ್ನು ಮೈಗೂಡಿಸಿಕೊಳ್ಳಲು ಸೂಚಿಸಿದರು ಎಂದರು.
ಈ ಸಂದರ್ಭ ರೊಸಾರಿಯೋ ಕೆಥೆಡ್ರಲ್‍ನ ಪ್ರಧಾನ ಧರ್ಮಗುರು ಫಾ. ಆಲ್ಪ್ರೆಡ್ ಪಿಂಟೋ ಸೇರಿದಂತೆ ನಾನಾ ಧರ್ಮಗುರುಗಳು ಭಾಗವಹಿಸಿದ್ದರು. ಇದೇ ರೀತಿಯಲ್ಲಿ ಮಂಗಳೂರಿನ ಮಿಲಾಗ್ರಿಸ್ ಚರ್ಚ್‍ನಲ್ಲಿ ಫಾ. ಬೊನವೆಂಚರ್ ನಜರೇತ್, ಉರ್ವ ಲೇಡಿಹಿಲ್ ಚರ್ಚ್‍ನಲ್ಲಿ ಫಾ. ಬೆಂಜಮಿನ್ ಪಿಂಟೋ, ಅಶೋಕನಗರದ ಸಂತ ಡೊಮಿನಿಕ್ ಚರ್ಚ್‍ನಲ್ಲಿ ಫಾ. ಡೇನಿಯಲ್ ಸಂಪತ್ ವೇಗಸ್, ಕೂಳೂರು ಚರ್ಚ್‍ನಲ್ಲಿ ಫಾ. ವಿಜಯ ವಿಕ್ಟರ್ ಲೋಬೋ ಅವರು ಕ್ರಿಸ್ಮಸ್ ಸಂಭ್ರಮದ ಬಲಿಪೂಜೆಯ ನೇತೃತ್ವ ವಹಿಸಿ ಸಂದೇಶವನ್ನು ನೀಡಿದರು. ಇದೇ ರೀತಿಯಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಚರ್ಚ್‍ಗಳಲ್ಲಿ ಸಂಜೆ ಹೊತ್ತು ಕ್ರಿಸ್ಮಸ್ ಕ್ಯಾರೆಲ್ಸ್, ಕ್ರಿಸ್ಮಸ್ ಬಲಿಪೂಜೆ ಹಾಗೂ ಕ್ರಿಸ್ಮಸ್ ಕಾರ್ಯಕ್ರಮಗಳು ಸಾಗಿತು. ಕ್ರೈಸ್ತರು ಹಬ್ಬದ ಸಂಭ್ರಮದಲ್ಲಿ ಪರಸ್ಪರ ಶುಭಾಶಯ ಕೋರುವ ಸಿಹಿತಿನಸುಗಳು( ಕುಸ್ವಾರ್) ಕೇಕ್‍ಗಳನ್ನು ನೀಡುವ ದೃಶ್ಯಗಳು ಎಲ್ಲೆಡೆ ಕಾಣಿಸಿಕೊಂಡಿತು.


ಡಿ.25ರಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್‍ಗಳಲ್ಲಿ ವಿಶೇಷ ಪೂಜೆಗಳು ನಡೆದರೆ ಸಂಜೆ ಕ್ರಿಸ್ಮಸ್ ಕಾರ್ಯಕ್ರಮಗಳು ಸಾಗಲಿದೆ. ಬಿಷಪ್ ಅವರು ಮಂಗಳೂರಿನ ನಂತೂರಿನ ಭಗಿನಿಯರ ಕಾನ್ವೆಂಟ್‍ನಲ್ಲಿ ಹಬ್ಬದ ವಿಶೇಷ ಬಲಿಪೂಜೆ ಹಾಗೂ ಸಂದೇಶವನ್ನು ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು