1:19 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ: ಸಚಿವ ಸುನಿಲ್ ಕುಮಾರ್ ಮೊದಲ ಬಾರಿಗೆ ಧ್ವಜಾರೋಹಣ

26/01/2022, 13:01

ಮಂಗಳೂರು(reporterkarnataka.com): ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ನೆಹರೂ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.


ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಸಚಿವ ಸುನಿಲ್ ಕುಮಾರ್ ಅವರು ಸಚಿವರಾದ ಬಳಿಕ ಜಿಲ್ಲಾಡಳಿತ ವತಿಯಿಂದ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು.


ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್,  ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಹರೇಹಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು