ಇತ್ತೀಚಿನ ಸುದ್ದಿ
ಕಡಲನಗರಿಗೆ ಗೋವಾ ಮುಖ್ಯಮಂತ್ರಿ ಸಾವಂತ್: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಸ್ವಾಗತ
08/02/2023, 21:42

ಮಂಗಳೂರು(reporterkarnataka.com): ಕಡಲನಗರಿಗೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಉಪಮೇಯರ್ ಪೂರ್ಣಿಮಾ, ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರಾ, ಮಂಡಲ ಉಪಾಧ್ಯಕ್ಷ ರಮೇಶ್ ಹೆಗ್ಡೆ, ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷರಾದ ಪೂರ್ಣಿಮಾ ರಾವ್ ಮತ್ತಿತರರು ಉಪಸ್ಥಿತರಿದ್ದರು.