2:04 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ ಪಾರು

15/01/2025, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುದ್ದಿ ಮಾಡಲು ಹೋದ ಯೂಟ್ಯೂಬರ್ ಒಬ್ಬ ಆನೆ ದಾಳಿಯಿಂದ ಪಾರಾದ ಘಟನೆ ಮಂಗಳವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜಿಲ್ಲೆಯ ಕಟ್ಟ ಕಡೆಯ ಗ್ರಾಮ ವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಮಂಗಳವಾರ ಸಂಜೆ ಗ್ರಾಮಕ್ಕೆ ತೆರಳಿದ್ದಾರೆ. ಗ್ರಾಮಕ್ಕೆ ಹೋಗಲು ರಸ್ತೆ ಇಲ್ಲದ ಕಾರಣ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ಒಂದು ಏಕಾಏಕಿ ದಾಳಿಗೆ ಮುಂದಾಗಿದೆ. ಯೂಟ್ಯೂಬರ್ ಅಭಿಷೇಕ್ ಕೂದಲೆಳೆ ಅಂತರದಲ್ಲಿ ಕಂದಕಕ್ಕೆ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಆನೆಯನ್ನು ಕಂಡ ಅಭಿಷೇಕ್ ಕಂದಕಕ್ಕೆ ಜಿಗಿದಿದ್ದರಿಂದ ಕಾಲು ಹಾಗೂ ಮೂಗಿನ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಯುನೈಟೆಡ್ ಮೀಡಿಯಾ ಎಂಬ ಯುಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದು. ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣಕ್ಕೆ ಮಂಗಳವಾರ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ಆರೀಫ್ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಯಿತು. ಈ ಸಂದರ್ಭದಲ್ಲಿ ಆರೀಫ್, ನವೀನ್,
ಸಂಜಯ್ ಗೌಡ ಕೊಟ್ಟಿಗೆಹಾರ, ಗಿರೀಶ್, ಸುಂದರೇಶ, ಭಕ್ತಿ ಶ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು