7:48 PM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಕಡೂರು ಬಿಇಒ ಲೋಕಾಯುಕ್ತ ಬಲೆಗೆ: ಶಿಕ್ಷಕರಿಂದ ಲಂಚ ಪಡೆಯುತ್ತಿದ್ದಾಗ ಬಂಧನ

19/10/2022, 09:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka gmail.com

ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುವಾಗ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಗಳವಾರ ಮಧ್ಯಾಹ್ನ ಸಹ ಶಿಕ್ಷಕ ಎನ್.ಎಸ್. ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಕಾರಿ ಕೆ.ಎನ್. ಜಯಣ್ಣ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕರುಗಳಾದ ಸಚ್ಚಿನ್ ಮತ್ತು ಬಿ. ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಜಿ.ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಲು ಕ್ಷೇತ್ರ ಶಿಕ್ಷಣಾಕಾರಿಗಳು ಹಣದ ಬೇಡಿಕೆ ಇಟ್ಟಿದ್ದು, ಮಂಗಳವಾರ ಈ ಸಂಬಂಧ ಶಿಕ್ಷಕ ರಾಜಪ್ಪ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿ. ತಿಮ್ಮಾಪುರ ಗೇಟ್‌ನಲ್ಲಿ 15 ಸಾವಿರ ಲಂಚ ನೀಡುವಾಗ ಸಿಕ್ಕಿಬಿದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು