3:19 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕಡೂರು: ಗೃಹಿಣಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ; ಎಸ್ಪಿ ಕಚೇರಿ ಎದುರು ಕಣ್ಣೀರಿಟ್ಟ ಹೆತ್ತಬ್ಬೆ

17/07/2023, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು,ನ್ಯಾಯಕ್ಕಾಗಿ ಹೆತ್ತವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಕಣ್ಣೀರಿಟ್ಟ ಘಟನೆ ನಡೆದಿದೆ.


ರುಕ್ಮಿಣಿ (31) ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ನಿನ್ನೆ ಮಧ್ಯಾಹ್ನ 12 ಗಂಟೆಗೆ ರುಕ್ಮಿಣಿ ಅವರು ಸಾವನ್ನಪ್ಪಿದ್ದರು.
ಮಂಡ್ಯ ಜಿಲ್ಲೆಯ ರಾಗಿಮುದ್ದನಹಳ್ಳಿ ಮೂಲದ ರುಕ್ಮಿಣಿ ಅವರು ಮದುವೆಯಾಗಿ ಕಡೂರಿಗೆ ಬಂದಿದ್ದರು. ಮಂಡ್ಯದಿಂದ ಬಂದ ರುಕ್ಮಿಣಿ ಕುಟುಂಬಸ್ಥರು ಆಗಮಿಸಿದ್ದಾರೆ. ಮಗಳದ್ದು ಆತ್ಮಹತ್ಯೆಯಲ್ಲ. ಆತ್ಮಹತ್ಯೆಯೆಂದು ಪ್ರಕರಣ ಮರೆಮಾಚಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೂರು ದಾಖಲಿಸಿಕೊಳ್ಳಲು ಕಡೂರು ಪೊಲೀಸರ ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದ್ದಾರೆ. ಗಂಡ ಕಣ್ಣನ್ ವಿರುದ್ಧ ಕೊಲೆ ಆರೋಪವನ್ನು ರುಕ್ಮಿಣಿ ಕುಟುಂಬಸ್ಥರು ಮಾಡಿದ್ದಾರೆ. ಮದುವೆ ಆದಾಗಿನಿಂದಲೂ ಮಗಳಿಗೆ ಅತ್ತೆ-ಮಾವ, ಗಂಡ ಕಿರುಕುಳ ನೀಡುತ್ತಿದ್ದರು ಎಂದು ರುಕ್ಮಿಣಿ ಕಡೆಯವರು ಆರೋಪಿಸಿದ್ದಾರೆ.
13 ವರ್ಷಗಳ ಹಿಂದೆ ಕಡೂರಿನ ಕಣ್ಣನ್ ಗೆ ಮಂಡ್ಯದ ರುಕ್ಮಿಣಿ ಅವರನ್ನು ಮದುವೆ ಮಾಡಿಕೊಡಲಾಗಿತ್ತು.
ರುಕ್ಮಿಣಿಗೆ ಹಲ್ಲೆ ಮಾಡಿರುವುದನ್ನು ಆಕೆಯ ಸಾವಿನ ನಂತರ ಪತಿ ಕಣ್ಣನ್ ಒಪ್ಪಿಕೊಂಡಿರುವ ಆಡಿಯೋವೊಂದು ಲಭ್ಯವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು