ಇತ್ತೀಚಿನ ಸುದ್ದಿ
ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ
29/11/2021, 08:54
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಡೂರು ನಗರದ ದೊಡ್ಡಪೇಟೆಯಲ್ಲಿ ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೊಡ್ಡಪೇಟೆಯಲ್ಲಿ ನಿರ್ಮಾಣ ಹಂತದ ಮನೆಯ ಟ್ಯಾಂಕ್ ಕ್ಲೀನ್ ಮಾಡುವಾಗ ಈ ಅವಘಡ ನಡೆದಿದೆ. ಮೃತಪಟ್ಟವರನ್ನು ಕುಮಾರ್ (50) ಹಾಗೂ ವಸಂತ್ (35) ಎಂದು ಗುರುತಿಸಲಾಗಿದೆ. ಖಲೀಂ ಎಂಬವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.