ಇತ್ತೀಚಿನ ಸುದ್ದಿ
ಕದ್ರಿ ಕೈಬಟ್ಟಲು ಕೆರೆ ಲೋಕಾರ್ಪಣೆ: ಶಾಸಕ ವೇದವ್ಯಾಸ ಕಾಮತ್ ರಿಂದ ಅಭಿವೃದ್ಧಿ ಸೌಲಭ್ಯಗಳ ಅನಾವರಣ
24/03/2023, 23:41

ಮಂಗಳೂರು(reporterkarnataka.com): ಹಲವು ವರ್ಷಗಳ ಇತಿಹಾಸವಿರುವ ಮಂಗಳೂರು ತಾಲೂಕಿನ ಅಳಪೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಅಂದಾಜು 2.62 ಎಕರೆ ವಿಸ್ತೀರ್ಣದ ಬೈರಾಡಿ ಕೆರೆ, ಅಲ್ಲಿನ ಉದ್ಯಾನವನ, ವಾಕಿಂಗ್ ಟ್ರ್ಯಾಕ್, ಮಕ್ಕಳ ಆಟದ ಸ್ಥಳ, ಜಿಮ್ ಇತ್ಯಾದಿ ಸೇರಿದಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಂದಾಜು 1.25 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಸೌಲಭ್ಯಗಳನ್ನು
ಶುಕ್ರವಾರ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಒಳಗೊಂಡಂತೆ ಮಂಗಳೂರು ಮಹಾನಗರ ಪಾಲಿಕೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಇದೇ ವೇಳೆ ಗಣ್ಯರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2.38 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡ ಕದ್ರಿ ಕೈ ಬಟ್ಟಲು ಕೆರೆಯನ್ನ ಸಹ ಲೋಕಾರ್ಪಣೆ ಮಾಡಿದರು.