10:03 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಕದ್ರಿ ಮಂಜುನಾಥ ದೇವಸ್ಥಾನ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದ ಸಮಿತಿಗೆ ಒಪ್ಪಿಸಿ: ಮಾಜಿ ಮೇಯರ್‌ ಹರಿನಾಥ್‌ 

17/01/2022, 16:00

ಮಂಗಳೂರು(reporterkarnataka.com): ನಗರದ ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕೆಂದು ಮಾಜಿ ಮೇಯರ್‌ ಹಾಗೂ ಕದ್ರಿ ಯೋಗೀಶ್ವರ ಮಠದ ಅಧ್ಯಕ್ಷ ಹರಿನಾಥ್‌ ಒತ್ತಾಯಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಮುಖ್ಯಮಂತ್ರಿ ಹಾಗೂ ಧಾರ್ಮಿಕ ದತ್ತಿ ಇಲಾಖಾ ಮಂತ್ರಿಗಳು ಎಲ್ಲಾ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳನ್ನು ಆಯಾಯ ಸಂಬಂಧಪಟ್ಟವರಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದ್ದರಿಂದ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕು. ಕದ್ರಿ ದೇವಸ್ಥಾನ ಮತ್ತು ಕದ್ರಿ ಮಠಕ್ಕೆ ಮೊದಲಿನಿಂದಲೂ ಉತ್ತಮ ಸಂಬಂಧವಿದೆ. ಈ ಹಿಂದೆ ನಮ್ಮ ಮಠಕ್ಕೆ ಸಂಬಂಧಪಟ್ಟಿತ್ತು. ಸರ್ಕಾರ ಅಂತಹ ನಿರ್ಧಾರ ಮಾಡಿದರೆ ಅದರ ಮೊದಲ ಹಕ್ಕುದಾರರು ನಾವಾಗಿರುತ್ತೇವೆ. ಆದಕ್ಕೆ ದಾಖಲೆ-ಇತಿಹಾಸ ಇದೆ ಎಂದರು.

ಸರ್ಕ್ಯೂಟ್‌ ಹೌಸ್‌ನಿಂದ ಪದವು ಹೈಸ್ಕೂಲ್‌ವರೆಗಿನ ಜೋಗಿ ಮಠದ ರಸ್ತೆ ಎಂದು ನಾಮಕರಣ ಮಾಡಿತ್ತು. ಆದರೆ ಸ್ಮಾರ್ಟ್‌ ಸಿಟಿಯ ಕೆಲಸದ ವೇಳೆ ಆ ಫಲಕವನ್ನು ಕಿತ್ತು ಬಿಸಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು