12:28 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಕದ್ರಿ ವಾರ್ಡ್ ನಲ್ಲಿ 2 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

26/03/2023, 12:16

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 33ನೇ ಕದ್ರಿ ವಾರ್ಡಿನ ಆಳ್ವಾರಿಸ್ ರಸ್ತೆಯ ಅಗಲೀಕರಣ, ಚರಂಡಿ ಹಾಗೂ ಫುಟ್‌ಪಾತ್ ನಿರ್ಮಾಣಕ್ಕಾಗಿ 2 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ನಗರದ ಅಭಿವೃದ್ಧಿ ವಿಚಾರದಲ್ಲಿ ತಾವು ನೀಡಿರುವ ಆದ್ಯತೆ ಮತ್ತು ರಾಜ್ಯ ಹಾಗೂ ಕೇಂದ್ರ ಸರಕಾರಗಳ ಬೆಂಬಲವನ್ನು ವಿವರಿಸಿದರು.
ಸ್ಥಳೀಯ ಕಾರ್ಪೊರೇಟರ್ ಮನೋಹರ್ ಶೆಟ್ಟಿ ಅವರ ಒತ್ತಾಸೆಯಂತೆ ಈ ಅಭಿವೃದ್ಧಿ ಕಾಮಗಾರಿಗಳಿಗೆ ಮೇಯರ್ ಜಯಾನಂದ ಅಂಚನ್‌ ಅವರ ಮೂಲಕ ಚಾಲನೆ ನೀಡಲಾಗಿದೆ ಎಂದು ಶಾಸಕ ಕಾಮತ್‌ ಹೇಳಿದರು.
ಈ ಭಾಗದ ಕಾಂಕ್ರೀಟ್ ರಸ್ತೆಗೆ ಈಗಾಗಲೇ ಅನುದಾನ ಒದಗಿಸಲಾಗಿದ್ದು, 2 ಕೋಟಿ ರೂ.ಗಳ ವೆಚ್ಚದಲ್ಲಿ ಚರಂಡಿ, ಫುಟ್‌ಪಾತ್‌, ಲೈಟ್ ಕಂಬಗಳ ದುರಸ್ತಿ ಕಾರ್ಯ ನಡೆಯಲಿದೆ. ನಗರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು, ಒಟ್ಟಾರೆ 4,000 ಕೋಟಿಗೂ ಅಧಿಕ ಅನುದಾನ ಬಂದಿದೆ. 2025ರ ಹೊತ್ತಿಗೆ ಮಂಗಳೂರಿನ ಚಿತ್ರಣವನ್ನು ಸಮಗ್ರವಾಗಿ ಬದಲಿಸುವ ಉದ್ದೇಶ ಹೊಂದಲಾಗಿದೆ ಎಂದು ಕಾಮತ್ ಹೇಳಿದರು.
ಈಗಾಗಲೇ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇವೆ. ಮುಂದೆ ಮತ್ತೆ ಮುಂದೆಯೂ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಸ್ಥಳೀಯ ಕಾರ್ಪೊರೇಟರ್ ಕದ್ರಿ ಮನೋಹರ್ ಶೆಟ್ಟಿ, ಲೀಲಾವತಿ‌ ಪ್ರಕಾಶ್, ವಿಶ್ವ ಹಿಂದೂ ಪರಿಷತ್‌ ಮುಖಂಡರಾದ ಶರಣ್ ಪಂಪ್‌ವೆಲ್‌, ಯಶವಂತ್, ವಿಜಯ್ ಕುಮಾರ್, ಅಶೋಕ್, ತಾರಾನಾಥ್ ಶೆಟ್ಟಿ, ಯಶವಂತ ನಾಯಕ್, ವಸಂತ್, ದಿನೇಶ್ ಅಮೀನ್, ಮನೋಜ್ ನಂತೂರು, ವಿಜಿತ್ ಶೆಟ್ಟಿ, ನಾಗೇಶ್ ಕದ್ರಿ,ಸಚಿನ್ ಕದ್ರಿ, ಬಿಪಿನ್ ಶೆಟ್ಟಿ, ಚಂದ್ರಕಾಂತ್, ಪ್ರಸಾದ್, ತುಳಸಿ ಕದ್ರಿ, ಚವಣ್ ಕುಮಾರ್, ಹೇಮಾನಂದ ಕೊಡಿಯಾಲಬೈಲ್, ಕೇಶವ್ ಕದ್ರಿ, ಸಚಿನ್, ಸಹನ್, ಅವಿನಾಶ್ ರೈ, ಶ್ರೀನಾಥ್, ಪ್ರತೀಕ್ ಶೆಟ್ಟಿ, ಪ್ರದೀಪ್ ಆಚಾರ್ಯ, ಪ್ರತಾಪ್ ಚಂದ್ರ ಶೆಟ್ಟಿ, ಮುಕುಂದ್, ಜಗದೀಶ್ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು