9:59 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ: ಶಾಸಕ ವೇದವ್ಯಾಸ ಕಾಮತ್

26/07/2021, 19:18

ಮಂಗಳೂರು(reporterkarnataka news): ಕಾರ್ಗಿಲ್ ಗೆಲುವಿಗೆ 22 ವರ್ಷ ಸಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಕದ್ರಿ ಯೋಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,

ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅವರೆಲ್ಲರನ್ನೂ ರಾಜಕೀಯ ರಹಿತವಾಗಿ ಗೌರವಿಸುವ ಕೆಲಸವಾಗಬೇಕು. ಮಾತೃಭೂಮಿಯ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಯೋಧರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. 

ಭಾರತ ಎಂದೆಂದಿಗೂ ಶಾಂತಿಯನ್ನು ಬಯಸುವ ರಾಷ್ಟ್ರ. ಆದರೆ ಅದನ್ನು ಅಸಹಾಯತೆ ಎಂದು ಭಾವಿಸಿದರೆ ಕಾರ್ಗಿಲ್ ಕದನ, ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ಮೇಲಿನ ದಾಳಿಯ ಮೂಲಕ ಸೇನಾ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಡುವಲ್ಲಿ ಭಾರತೀಯ ಸೇನೆ ಸಮರ್ಥವಾಗಿದೆ ಎಂದರು. ಕದ್ರಿಯ ಯೋಧ ಸ್ಮಾರಕದ ಅಭಿವೃದ್ಧಿಗೆ 25 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗುವುದು. ಮೇಲ್ಛಾವಣಿ, ಬೆಳಕಿನ ವ್ಯವಸ್ಥೆ, ಸೌಂಡ್ ಸಿಸ್ಟಮ್, ಕಾರಂಜಿಗಳ ಅಭಿವೃದ್ಧಿ ಸೇರಿದಂತೆ ಯೋಧ ಸ್ಮಾರಕದ ಸಮಗ್ರ ಅಭಿವೃದ್ಧಿಗೆ ಅನುದಾನ ವಿನಿಯೋಗಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶಕಿಲಾ ಕಾವಾ, ಬಿಜೆಪಿ ಮುಖಂಡರಾದ ರೂಪಾ.ಡಿ ಬಂಗೇರ, ಪೂಜಾ ಪೈ, ಪ್ರಶಾಂತ್ ಪೈ, ಸೈನಿಕರ ಸಂಘದ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ, ಕಾರ್ಯದರ್ಶಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ,ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಕ್ರಮ್ ದತ್ತ, ಹಿರಿಯ ಅಧಿಕಾರಿಗಳಾದ  ಬ್ರಿಗೇಡಿಯರ್ ಐ.ಎನ್ ರೈ, ಕರ್ನಲ್ ಎನ್.ಶರತ್ ಭಂಡಾರಿ, ಕರ್ನಲ್ ಜಯಚಂದ್ರನ್, ರೋಟರಿ ಪ್ರಮುಖರಾದ ಜೆ.ಪಿ ರೈ, ಲಯನ್ಸ್ ಪ್ರಮುಖರಾದ ವಿಜಯ ವಿಷ್ಣು ಮಯ್ಯ, ರೋಟರಿ ಸಂಸ್ಥೆಯ ಪ್ರಮುಖರು, ಲಯನ್ಸ್ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು