4:12 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಫ್‌ ಸಿರಫ್‌ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌

06/10/2025, 19:38

*ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ.*

*5 ವರ್ಷದೊಳಗಿನ ಮಕ್ಕಳಿಗೆ ಸಿರಫ್‌ ಕೊಡುವಾಗ ಎಚ್ಚರಿಕೆಗೆ ಸಲಹೆʼ*

*ʼಡ್ರಗ್ಸ್‌ ಕಲಬೆರಕೆʼ ಬಗ್ಗೆ ಈ ಹಿಂದೆಯೇ ಕೇಂದ್ರಕ್ಕೆ ಪತ್ರ ಬರೆಯಲಾಗಿತ್ತು*

ಹಾಸನ(reporterkarnataka.com): ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಫ್‌ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹಾಸನದ ಚೆನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿಯ ಕಾಫ್‌ ಸಿರಫ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್‌ ಸಿರಫ್‌ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

*ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ:*
ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್‌ ಸಿರಫ್‌ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ. ಹಾಗಾಗಿ ಇಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಆರೋಗ್ಯ ಸಚಿವರು, ಔಷಧಿ ತಯಾರಿಕಾ ಘಟಕಗಳ ಬೇಜವಾಬ್ದಾರಿಯಿಂದಾಗಿ ತಮಿಳುನಾಡು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೆರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದರು.

*ಪೋಷಕರು ಎಚ್ಚರಿಕೆ ವಹಿಸಬೇಕು:*
ರಾಜ್ಯದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಯಾವುದೇ ಸಿರಫ್‌ ಕುಡಿಸುವಾಗಲೂ ಪೋಷಕರು ಬಹಳ ಎಚ್ಚರಿಕೆ ವಹಿಸಬೇಕು. ಕಾಫ್‌ ಸಿರಫ್‌ ಸೇವನೆ ಕಡಿಮೆ ಮಾಡಬೇಕೆಂದು ಸಲಹೆ ನೀಡಿದರು.

*ಕೇಂದ್ರಕ್ಕೆ ಪತ್ರ ಬರೆದಿದ್ದೆ:* ಕೆಲ ಔಷಧಿಗಳ ಕಲಬೆರಕೆ, ನಕಲಿ ಔಷಧಿ ಮತ್ತು ತಪಾಸಣೆ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಯಾವುದೇ ಡ್ರಗ್ಸ್‌ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶಾದ್ಯಂತ ಮಾಹಿತಿ ರವಾನೆ-ವಿನಿಮಯಕ್ಕೆ ಪ್ರತ್ಯೇಕ ʼವೆಬ್‌ಸೈಟ್‌ʼ ರಚಿಸುವಂತೆ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್‌ ಇದೇ ವೇಳೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು