ಇತ್ತೀಚಿನ ಸುದ್ದಿ
ಕೈ ನಾಯಕರ ದಂಡು ಕಡಲನಗರಿಯತ್ತ: ಜ.22ರಂದು ಸಿದ್ದರಾಮಯ್ಯ ಸೇರಿದಂತೆ 40ಕ್ಕೂ ಹೆಚ್ಚು ನೇತಾರರು ಮಂಗಳೂರಿಗೆ
20/01/2023, 13:34

ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಂ. ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲ ಸೇರಿದಂತೆ 40ಕ್ಕೂ ಹೆಚ್ಚು ನಾಯಕರು ಜನವರಿ 22ರಂದು ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
22ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಸಿದ್ದರಾಮಯ್ಯ ಸೇರಿದಂತೆ ಎಲ್ಲ ಹಿರಿಯ ಕಾಂಗ್ರೆಸ್ ನಾಯಕರುಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಇದಕ್ಕೆ ಈಗಾಗಲೇ ಭಾರಿ ಸಿದ್ದತೆ ನಡೆದಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ, ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಸೀಟುಗಳನ್ನು ಗೆಲ್ಲುವುದು ಕೂಡ ಕಾಂಗ್ರೆಸ್ ಗೆ ಅನಿವಾರ್ಯವಾಗಿದೆ.