9:39 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಕೈಲಾಶ್ ಖೇರ್, ವಿಜಯ ಪ್ರಕಾಶ್ ನೈಟ್: ಮಂಗಳೂರು ನಗರ ಪೊಲೀಸರಿಂದ ಸಂಚಾರಿ ಸಲಹೆ; ಪಾರ್ಕಿಂಗ್ ಸ್ಥಳ ನಿಗದಿ

02/01/2026, 21:29

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ ಜನವರಿ 3 ಮತ್ತು 4ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುವುದರಿಂದ ಮಂಗಳೂರು ನಗರ ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ.
ಈ ಕಾರ್ಯಕ್ರಮಗಳಿಗೆ ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವವರಿದ್ದು, ಈ ಸಮಯ ಕೊಟ್ಟಾರಚೌಕಿ – ಪಣಂಬೂರು ರಾಷ್ಟ್ರೀಯ ಹೆದ್ದಾರಿ ಮತ್ತು ತಣ್ಣೀರುಬಾವಿ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುತ್ತದೆ. ಕಾರ್ಯಕ್ರಮ ನಡೆಯುವ ಸಮಯ ಕುದುರೆಮುಖ ಜಂಕ್ಷನ್‌ನಿಂದ ತಣ್ಣೀರುಬಾವಿ ಬೀಚ್ ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಯಾವುದೇ ವಾಹನಗಳನ್ನು ಪಾರ್ಕ್ ಮಾಡುವಂತಿಲ್ಲ.

👉ಕಾರ್ಯಕ್ರಮಗಳಿಗೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ತಣ್ಣೀರು ಬಾವಿ ಬೀಚ್ ರಸ್ತೆಯಲ್ಲಿ ನಿಗಧಿಪಡಿಸಿದ Parking place ಗಳಲ್ಲಿ ಮಾತ್ರ ನಿಲ್ಲಿಸುವುದು.

👉ಕಾರ್ಯಕ್ರಮದ ಮಾರ್ಗದಲ್ಲಿ ವಾಹನ ನಿಲುಗಡೆಯ ಸೂಚನಾ ಫಲಕದ ಫ್ಲೆಕ್ಸ್ ಗಳನ್ನು ಅಳವಡಿಸಿದ್ದು, ಮಾರ್ಗಸೂಚಿಯನ್ನು ಅನುಸರಿಸುವುದು ಹಾಗೂ ಕಾರ್ಯಕ್ರಮ ಪ್ರಾರಂಭವಾಗುವ ಮುಂಚಿತವಾಗಿ ಬಂದು ನಿರ್ಧಿಷ್ಟ ಸ್ಥಳದಲ್ಲಿ ನಿಲ್ಲಿಸುವುದು.

*ನಿಗದಿ ಪಡಿಸಿರುವ ಪಾರ್ಕಿಂಗ್ ಸ್ಥಳಗಳು:*
1.ಫೀಜಾ ಕ್ರಿಕೆಟ್ ಗ್ರೌಂಡ್ (ಹೋಟೆಲ್ ನಿತ್ಯಾಧರ ಮುಂಭಾಗದ ಪಾರ್ಕಿಂಗ್ ಮೈದಾನ)
2.ಡೆಲ್ಟಾ ಮೈದಾನ ಪಾರ್ಕಿಂಗ್
3.ರಫ್ತಾರ್ ಪಾರ್ಕಿಂಗ್
4.ಬೆಂಗ್ರೆ ತಣ್ಣೀರು ಬಾವಿ ಮಸೀದಿ ಪಾರ್ಕಿಂಗ್ ಸ್ಥಳ
5.ಕಟ್ಟೆ ಗ್ರೌಂಡ್ ಪಾರ್ಕಿಂಗ್ ಸ್ಥಳ
6.ದೋಸ್ತ್ ಗ್ರೌಂಡ್
7.ಫಾತಿಮ ಚರ್ಚ್ ಪಾರ್ಕಿಂಗ್
8.ಎ.ಜೆ ಶೆಟ್ಟಿ ರವರ ಗ್ರೌಂಡ್ (ಎಸ್.ಇ.ಝ್ ರಸ್ತೆ)

ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸುಲ್ತಾನ್ ಬತ್ತೇರಿಯಿಂದ ಫೇರಿಯನ್ನು ತಮ್ಮ ಅನುಕೂಲಕ್ಕಾಗಿ ಉಪಯೋಗಿಸಬಹುದಾಗಿದೆ. ಸದರಿ ಕಾರ್ಯಕ್ರಮಗಳ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ರಸ್ತೆಯಲ್ಲಿ ಅನಾವಶ್ಯಕವಾಗಿ ನಿಲ್ಲದೇ ಶಿಸ್ತನ್ನು ಕಾಪಾಡುವುದು ಮತ್ತು ಪೊಲೀಸರು ನೀಡುವ ಸೂಚನೆಗಳನ್ನು ಪಾಲಿಸಲು ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು