4:05 PM Saturday5 - July 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ…

ಇತ್ತೀಚಿನ ಸುದ್ದಿ

ಕಜಕಿಸ್ತಾನ: ಅಜರ್‌ಬೈಜಾನ್ ಏರ್‌ಲೈನ್ಸ್ ಪತನ; ಭಾರೀ ಸಾವು- ನೋವಿನ ಶಂಕೆ; ರಷ್ಯಾದ ಗ್ರೋಜ್ನಿಗೆ ಪ್ರಯಾಣಿಸುತ್ತಿದ್ದ ವಿಮಾನ

26/12/2024, 23:45

ಅಕ್ತಾವು(reporterkarnataka.com): ಸುಮಾರು 72 ಪ್ರಯಾಣಿಕರನ್ನು ಹೊತ್ತ ಅಜರ್‌ಬೈಜಾನ್ ಏರ್‌ಲೈನ್ಸ್ ಕಜಕಿಸ್ತಾನದ ಅಕ್ತಾವಿನಲ್ಲಿ ವಿಮಾನ ಪತನಗೊಂಡಿದ್ದು, ಸುಮಾರು 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣಿಸುತ್ತಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ ನೆಲದತ್ತ ಧಾವಿಸಲಾರಂಭಿಸಿ ಕೆಲವೇ ಕ್ಷಣಗಳಲ್ಲಿ ನೆಲಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಭೀಕರ ಘಟನೆಯ ದೃಶ್ಯ ಸೆರೆಯಾಗಿದೆ. ದಟ್ಟ ಮಂಜಿನ ಕಾರಣ ವಿಮಾನದ ಮಾರ್ಗ ಕೊನೆಯ ಕ್ಷಣದಲ್ಲಿ ಬದಲಾಯಿಸಲಾಗಿತ್ತು. ಆದರೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೆ, ಅತ್ತ ಹಾರಾಡಲು ಸಾಧ್ಯವಾಗದೆ ವಿಮಾನ ನೆಲಕ್ಕೆ ಅಪ್ಪಳಿಸಿದೆ.
ಕಜಕಿಸ್ತಾನ ತುರ್ತು ಸಚಿವಾಲಯ ವಿಮಾನ ಪತನ ಮಾಹಿತಿ ನೀಡಿದೆ.
ರಷ್ಯಾದ ಗ್ರೋಜ್ನಿಗೆ ಹೊರಟಿದ್ದ ವಿಮಾನಕ್ಕೆ ಮಾರ್ಗ ಬದಲಾವಣೆ ಸೂಚನೆ ನೀಡಲಾಗಿತ್ತು. ಗ್ರೋಜ್ನಿಯಲ್ಲಿ ದಟ್ಟ ಮಂಜು ಆವರಿಸಿರುವ ಕಾರಣ ವಿಮಾನ ಹಾರಾಟ ಸವಾಲಾಗುವ ಸಾಧ್ಯತೆ ಇದೆ. ಹೀಗಾಗಿ ಮಾರ್ಗ ಬದಲಾವಣೆಗೆ ಸೂಚಿಸಲಾಗಿತ್ತು. ಆದರೆ ಅಕ್ತಾವು ಬಳಿ ವಿಮಾನ ಆಗಸದಲ್ಲೇ ಕೆಲ ಸುತ್ತು ಹೊಡದಿದೆ. ವಿಮಾನ ಲ್ಯಾಂಡಿಂಗ್ ಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಲ್ಯಾಂಡಿಂಗ್ ಸಾಧ್ಯವಾಗಿಲ್ಲ. ನೇರವಾಗಿ ವಿಮಾನ ನೆಲಕ್ಕೆ ಅಪ್ಪಳಿಸಿದೆ. ಇದರ ಪರಿಣಾಮ ವಿಮಾನ ಪತನಗೊಂಡಿದೆ.
ಪತನಗೊಂಡ ಕೆಲವೇ ನಿಮಿಷಗಳಲ್ಲಿ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದೆ. ಬೆಂಕಿ ನಂದಿಸಿ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತವಾಗಿದೆ. 52 ರಕ್ಷಣಾ ತಂಡದ ಸದಸ್ಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 11 ಯಂತ್ರಗಳನ್ನು ಬಳಸಿಕೊಲ್ಳಾಗಿದೆ. ಕಜಕಿಸ್ತಾನ್ ತುರ್ತು ಸಚಿವಾಲಯದ ಮಾಹಿತಿ ಪ್ರಕಾರ ಕೆಲ ಪ್ರಯಾಣಿಕರು ಬದುಕುಳಿದಿದ್ದಾರೆ. ಸದ್ಯ ಪ್ರಯಾಣಿಕರ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು