2:06 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ: ಶಾಸಕ ಡಾ. ಭರತ್ ಶೆಟ್ಟಿ

16/06/2024, 14:37

ಮಂಗಳೂರು(reporterkarnataka.com): ಪೆಟ್ರೋಲ್ ಬೆಲೆ ಕಳೆದ ಎರಡುವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಬಡ ಜನರಿಗೆ ಉಚಿತ ಗ್ಯಾರಂಟಿಯೊಂದಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯ ಗ್ಯಾರಂಟಿ ಸಿಗಲಿದೆ. ಕಾಂಗ್ರೆಸ್
ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಈಗಲೇ ಬೆಲೆ ಏರಿಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರೆ ಜನ ತಮ್ಮ ತಮ್ಮ ಬಜೆಟ್ ಹೊಂದಾಣಿಕೆ ಮಾಡಿಕೊಂಡು ಸಿದ್ದವಾಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಈಗಾಗಲೇ ಆಸ್ತಿ ತೆರಿಗೆ,ಸ್ಟಾಂಪ್ ಡ್ಯೂಟಿ ಸಹಿತ ದಿನ ಬಳಕೆಯ ವಸ್ತುಗಳ ಬೆಲೆ ಸದ್ದಿಲ್ಲದೆ ಏರಿಕೆಯಾಗಿದ್ದು ಜನತೆ ಇದಕ್ಕೆ ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು